2:55 PM Sunday7 - December 2025
ಬ್ರೇಕಿಂಗ್ ನ್ಯೂಸ್
Bagalkote | ಸಿದ್ಧಶ್ರೀ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆ : ಚಲನಚಿತ್ರಗಳ ಆಹ್ವಾನ Kodagu | ಮಡಿಕೇರಿ: ಆಕಸ್ಮಿಕ ಗುಂಡಿನ ಚೂರು ತಗುಲಿ ಇಬ್ಬರು ಯುವಕರಿಗೆ ಗಾಯ ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಸಚಿವ ಡಾ. ಶರಣಪ್ರಕಾಶ್‌ ಒತ್ತಾಯ ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ಭಾರತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Shivamogga | ಬಸ್ ಚಾಲಕನ ಅತೀ ವೇಗ, ಅಜಾಗರೂಕತೆ: ಬೈಕ್ ಸವಾರ ಗಂಭೀರ ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್‌ಮಾರ್ಕ್‌, HUID ಕಡ್ಡಾಯ ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ…

ಇತ್ತೀಚಿನ ಸುದ್ದಿ

ಋತುಚಕ್ರ ರಜೆ ನೀತಿ | ರಾಜ್ಯ ಸರಕಾರದ ಕ್ರಮ ಅಭಿನಂದನೀಯ: ಪದ್ಮರಾಜ್ ಆರ್. ಪೂಜಾರಿ

09/10/2025, 19:03

ಮಂಗಳೂರು(reporterkarnataka.com):ಕರ್ನಾಟಕದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರದ ರಜೆ ಎಂದು ವರ್ಷದಲ್ಲಿ ಹನ್ನೆರಡು ದಿನ ರಜೆ ನೀಡಲು ಮುಖ್ಯಮಂತ್ರಿ ಸಿದ್ದರಾಮ್ಯನವರ ನೇತೃತ್ವದ ಸರ್ಕಾರ ಒಪ್ಪಿಗೆ ನೀಡಿರುವುದು ಅಭಿನಂದನೀಯ. ಕರ್ನಾಟಕ ರಾಜ್ಯ ಸರ್ಕಾರ ಹೆಣ್ಣು ಮಕ್ಕಳ ಪರವಾಗಿ ಐತಿಹಾಸಿಕ ನಿರ್ಣಯ ಕೈಗೊಂಡಿದೆ.
ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ದುಡಿಯುವ ಎಲ್ಲ ಮಹಿಳೆಯರಿಗೂ ತಿಂಗಳಲ್ಲಿ ಒಂದು ದಿನ ವೇತನ ಸಹಿತ ಋತುಚಕ್ರದ ರಜೆ ನೀಡುವುದರಿಂದ ಮಹಿಳೆಯರ ಆರೋಗ್ಯದ ದೃಷ್ಟಿಯಿಂದಲೂ ಇದೊಂದು ಉತ್ತಮ ನಿರ್ಧಾರ. ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, ಎಂಎನ್‌ಸಿ ಮತ್ತು ಇತರೆ ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆ ನೀತಿಯನ್ನು ಜಾರಿಗೆ ತರಲು ಸಚಿವ ಸಂಪುಟ ನಿರ್ಣಯಿಸಿರುವುದರಿಂದ ಲಕ್ಷಾಂತರ ಮಹಿಳೆಯರಿಗೆ ಅನುಕೂಲವಾಗಲಿದೆ. ಸದಾ ಮಹಿಳೆಯರ ಪರ ಧ್ವನಿಯೆತ್ತುತ್ತಿರುವ, ಮಹಿಳೆಯರ ಪರ ಕಾಳಜಿ ವಹಿಸುತ್ತಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ಅವರಿಗೆ ಕೃತಜ್ಞತೆಗಳು. ಋತುಚಕ್ರದ ರಜೆ ನೀತಿಗಾಗಿ ಹಲವಾರು ವರ್ಷಗಳಿಂದ ಬೇರೆ ಬೇರೆ ಸಂಘಟನೆಗಳು ಹೋರಾಟ ನಡೆಸುತ್ತಾ ಬರುತಿತ್ತು. ಇದೀಗ ಅವರ ಹೋರಾಟಕ್ಕೂ ಪ್ರತಿಫಲ ಸಿಕ್ಕಿದಂತಾಗಿದೆ.
*-ಪದ್ಮರಾಜ್ ಆರ್. ಪೂಜಾರಿ*
ಕಾಂಗ್ರೆಸ್ ಮುಖಂಡರು

ಇತ್ತೀಚಿನ ಸುದ್ದಿ

ಜಾಹೀರಾತು