ಇತ್ತೀಚಿನ ಸುದ್ದಿ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಯಚೂರು ಜಿಲ್ಲಾ ಕಾರ್ಯದರ್ಶಿಯಾಗಿ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ನೇಮಕ
09/10/2025, 20:44

ರಾಯಚೂರು(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘಟನೆಯ ರಾಯಚೂರು ಜಿಲ್ಲಾ ಕಾರ್ಯದರ್ಶಿಯಾಗಿ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ನೇಮಕಗೊಂಡಿದ್ದಾರೆ.
ಹಲವು ದಶಕಗಳಿಂದ ಪತ್ರಿಕಾರಂಗದಲ್ಲಿ ನಿಸ್ವಾರ್ಥ ಸೇವೆ ಮಾಡುತ್ತಿರುವ ವಿರೂಪಾಕ್ಷಯ್ಯ ಸ್ವಾಮಿ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಜಿಲ್ಲಾ ಕಾರ್ಯದರ್ಶಿಯಾಗಿ ನೇಮಕ ಮಾಡಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ಅವರು ನೀಡಿದ ಆದೇಶದ ಮೇರೆಗೆ ರಾಜ್ಯ ಉಪಾಧ್ಯಕ್ಷ ಡಾ. ಎಸ್. ಎಸ್. ಪಾಟೀಲ್ ಹುಬ್ಬಳ್ಳಿ ಆದೇಶ ಪತ್ರವನ್ನು ವಿರೂಪಾಕ್ಷಯ್ಯ ಅವರಿಗೆ ಹಸ್ತಾಂತರ ಮಾಡಿದ್ದಾರೆ.
ಜಿಲ್ಲೆಯಲ್ಲಿ ಸಂಘಟನೆ ಬಲವರ್ಧನೆಗೆ ಮುತುವರ್ಜಿ ವಹಿಸಿ ಸಂಘಟನೆಯ ಕಾರ್ಯ ಚಟುವಟಿಕೆಗಳನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಮುತುವರ್ಜಿ ವಹಿಸಿ ಕಾರ್ಯ ಚಟುವಟಿಕೆ ನಡೆಸುವುದಾಗಿ ವಿರೂಪಾಕ್ಷಯ್ಯ ಸ್ವಾಮಿ ಹೇಳಿದ್ದಾರೆ.