3:26 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಮಹಿಳಾ ಪತ್ರಕರ್ತರಿಗೆ ನಿರ್ಬಂಧ | ಪ್ರಧಾನಿ ಉತ್ತರಿಸಲಿ: ಪದ್ಮರಾಜ್ ಆರ್. ಪೂಜಾರಿ ಆಗ್ರಹ

12/10/2025, 16:40

ಮಂಗಳೂರು(reporterkarnataka.com):ಭಾರತ ಪ್ರವಾಸದಲ್ಲಿರುವ ಅಫ್ಘಾನಿಸ್ಥಾನ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಾಖಿ ವಿದೇಶಾಂಗ ಸಚಿವ ಜೈಶಂಕರ್ ಜತೆ ದ್ವಿಪಕ್ಷೀಯ ಮಾತುಕತೆ ಬಳಿಕ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ವೇಳೆ ಮಹಿಳಾ ಪತ್ರಕರ್ತರ ಪಾಲ್ಗೊಳ್ಳುವಿಕೆಗೆ ನಿರ್ಬಂಧ ಹೇರಿರುವುದು ಆಘಾತಕಾರಿ ಎಂದು ಕಾಂಗ್ರೆಸ್ ಮುಖಂಡರ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ.
ಭಾರತೀಯರಾದ ನಾವು ಮಹಿಳೆಯರನ್ನು ಪೂಜನೀಯ ಭಾವನೆಯಿಂದ ನೋಡುತ್ತಿದ್ದೇವೆ. ಪ್ರತೀ ಕ್ಷೇತ್ರದಲ್ಲೂ ಮಹಿಳೆಯರಿಗೆ ಸಮಾನ ಅವಕಾಶಗಳಿವೆ. ಆದರೆ ಭಾರತದಲ್ಲೂ ತಾಲಿಬಾನಿ ನೀತಿ ಅನುಸರಿಸಿದ್ದು ಖಂಡನೀಯ. ಮಹಿಳಾ ಸ್ವಾತಂತ್ರ್ಯ ಬಗ್ಗೆ ಮಾತನಾಡೋ ನಮ್ಮ‌ಪ್ರಧಾನಿ‌ ನರೇಂದ್ರ ಮೋದಿಯವರು ಈಗ ತಾರತಮ್ಯ ಆಗಿದ್ದರೂ ಮೌನ ವಹಿಸಿರುವುದು ಅನುಮಾನ ಹುಟ್ಟಿಸುವಂತಿದೆ. ಈ ಹಿಂದೆ ಕಾಂಗ್ರೆಸ್ ನೇತೃತ್ವದ ಸರಕಾರವನ್ನು ತಾಲಿಬಾನಿ ಮನಸ್ಥಿತಿಯ ಸರ್ಕಾರ ಎಂದು ಟೀಕಿಸುತ್ತಿದ್ದ ಬಿಜೆಪಿಯವರು, ಈಗ ಇವರ ಮನಸ್ಥಿತಿ ಏನು ಎಂಬುದು ಜನತೆಗೆ ತಿಳಿಯುವಂತಾಗಿದೆ ಎಂದಿದ್ದಾರೆ.
ಅಫ್ಘಾನ್ ಸ್ತ್ರೀಯರಿಗೆ ಶಿಕ್ಷಣ, ಉದ್ಯೋಗದಿಂದ ವಂಚಿತರನ್ನಾಗಿಸಿರುವ ತಾಲಿಬಾನ್ ಆಡಳಿತವು ತನ್ನ ಕೆಟ್ಟ ಮನಃಸ್ಥಿತಿಯನ್ನು ಭಾರತದಲ್ಲೂ ಪ್ರದರ್ಶಿಸಿರುವ ಬಗ್ಗೆ ಕೂಡಲೇ ಪ್ರಧಾನಿಯವರು ಮೌನ ಮುರಿಯಲಿ. ಸಂವಿಧಾನದ ನಾಲ್ಕನೇ ಅಂಗ ಎನ್ನುವ ಮಾಧ್ಯಮ ಪ್ರತಿನಿಧಿಗಳಿಗೆ ಇಂತಹ ಪರಿಸ್ಥಿತಿಯಾದರೆ ಮುಂದಿನ ದಿನಗಳಲ್ಲಿ ನಾವು ಯಾವ ಸ್ಥಿತಿಗೆ ತಲುಪಬಹುದು? ಈ ಬಗ್ಗೆ ಪ್ರಧಾನಿ ಮೋದಿಯವರು ಉತ್ತರಿಸಲಿ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು