12:05 AM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ: ಸಿಎಂ ಸಿದ್ದರಾಮಯ್ಯ

14/10/2025, 18:41

*ಜಾತಿ ತಾರತಮ್ಯದ ಸಮಾಜದಲ್ಲಿ ಚಲನೆ ಇಲ್ಲ. ಚಲನೆ ಸಿಗಬೇಕಾದರೆ ವೈಜ್ಞಾನಿಕ ಮನೋಭಾವ ಮುಖ್ಯ: ಸಿ.ಎಂ ಕರೆ*

*ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ: ಸಿಎಂ*

ಬೆಂಗಳೂರು(repprterkarnataka.com): ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
ರಾಮಾಯಣ ಬರಡದ ವಾಲ್ಮೀಕಿ ಬೇಡರ ಜಾತಿಯವರಾದರೆ, ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ಹೀಗಾಗಿ ವಿದ್ಯೆ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶಗಳು ಬೇಕು ಅಷ್ಟೆ. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಂಡರೆ ನಿಮ್ಮ‌ ಹಾಗೂ ಸಮಾಜದ ಪ್ರಗತಿ ಸಾಧ್ಯ. ಈ ದಿಕ್ಕಿನಲ್ಲಿ ವಿಜ್ಞಾನದ ವಿದ್ಯಾರ್ಥಿಗಳು ಸಮಾಜವನ್ನು ಮುನ್ನಡೆಸಬೇಕು ಎಂದು ಕರೆ ನೀಡಿದರು.
ವಿಜ್ಞಾನದ ಓದು ಮತ್ತು ಅಧ್ಯಯನ ಮಾಡುವವರ ಸಂಖ್ಯೆ ಕಡಿಮೆ ಆಗುತ್ತಿರುವುದು ಅಪಾಯದ ಸಂಗತಿ‌. ವೈಜ್ಞಾನಿಕ ಮನೋಭಾವ ಮತ್ತು ವಿಜ್ಞಾನದ ಶಿಕ್ಷಣ ಸಮಾಜದ ಮತ್ತು ದೇಶದ ಪ್ರಗತಿಗೆ ಅತ್ಯಗತ್ಯ ಎಂದರು.
ವಿಜ್ಞಾನ ಓದಿದವರೂ ಮೂಢನಂಬಿಕೆ ಮತ್ತು ಕಂದಾಚಾರಕ್ಕೆ ಗಂಟು ಬೀಳುವುದು ಶಿಕ್ಷಣ ಕಲಿಕೆಯಲ್ಲಿನ ಕೊರತೆಯಾಗಿದೆ ಎಂದು ನುಡಿದರು.
ಬಹಳ ಹಿಂದೆಯೇ ಬಸವಾದಿ ಶರಣರು ಮೌಡ್ಯ , ಕಂದಾಚಾರಗಳ ವಿರುದ್ಧ ಕರೆ ನೀಡಿದರು. ಆದರೆ, ಇವತ್ತಿಗೂ ಮೌಡ್ಯ ಹೋಗಿಲ್ಲ. ಏಕೆಂದರೆ ನಮ್ಮದು ಜಾತಿ ತಾರತಮ್ಯದ ಸಮಾಜ ಆಗಿರುವುದರಿಂದ ಇದಕ್ಕೆ ಚಲನೆ ಇಲ್ಲ. ಪಟ್ಟಭದ್ರರು ತಾರತಮ್ಯವನ್ನು ಗಟ್ಟಿಗೊಳಿಸುವ ಸಲುವಾಗಿಯೇ ಮೌಡ್ಯವನ್ನು ಬಿತ್ತುತ್ತಾರೆ ಎಂದರು.
ನಾನು ಮೊದಲ ಬಾರಿ ಮುಖ್ಯಮಂತ್ರಿ ಆದಾಗ “ಮೌಡ್ಯ ನಿಷೇಧ ಕಾಯ್ದೆ” ಜಾರಿಗೆ ತರಲು ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಅಷ್ಟರಮಟ್ಟಿಗೆ ಮೌಢ್ಯ ಮತ್ತು ಮೌಢ್ಯ ಹಂಚುವ ಪಟ್ಟಭದ್ರರು ಆಳವಾಗಿ ಬೇರು ಬಿಟ್ಟಿದ್ದಾರೆ ಎಂದರು.
ವಿಜ್ಞಾನ ಓದಿದವರಿಗೆಲ್ಲಾ ವೈಜ್ಞಾನಿಕ‌ ಮನೋಭಾವ ಇಲ್ಲದಿರುವುದು ದುರಂತ. ವಿಜ್ಞಾನ ಓದಿಯೂ ಹಣೆಬರಹ ಮತ್ತು ಕರ್ಮ ಸಿದ್ದಾಂತ, ಗ್ರಹಚಾರಗಳನ್ನೆಲ್ಲಾ ನಂಬುತ್ತಾರೆ ಎಂದರೆ ಇವರು ವಿಜ್ಞಾನ ಓದಿದ್ದೇ ದಂಡ ತಾನೇ ಎಂದು ಪ್ರಶ್ನಿಸಿದರು.
ದೇಶದ ಪ್ರಧಾನಿ ಆಗಿದ್ದ ಜವಾಹರಲಾಲ್ ನೆಹರೂ ಅವರು ದೇಶದ ಯುವ ಜನತೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲಿ ಎನ್ನುವ ದೂರದೃಷ್ಟಿ ಹೊಂದಿದ್ದರು. ಇದಕ್ಕೆ ಅಗತ್ಯವಾದ ಶೈಕ್ಷಣಿಕ ಸಾಧನೆಗಳಿಗೆ ಕಾರಣರಾಗಿದ್ದರು ಎಂದು ವಿವರಿಸಿದರು.
52 ಕೋಟಿ ಅಂದಾಜಿನಲ್ಲಿ 7 ಅಂತಸ್ತಿನ ನೂತನ ಕಟ್ಟಡ ಉದ್ಘಾಟಿಸಲಾಗಿದೆ. ಎಂಟನೇ ಅಂತಸ್ತನ್ನು ನಿರ್ಮಿಸಲು 8 ಕೋಟಿ ರೂಪಾಯಿಗೆ ಬೇಡಿಕೆ ಸಲ್ಲಿಸಿದ್ದಾರೆ. ಸರ್ಕಾರ ಈ ಕೊಡಲು ಸಿದ್ದವಿದೆ ಎಂದು ಘೋಷಿಸಿದರು.
ಉನ್ನತ ಶಿಕ್ಷಣ ಸಚಿವರಾದ ಎಂ.ಸಿ.ಸುಧಾಕರ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು