11:30 PM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಆರೆಸ್ಸೆಸ್ ನಿಷೇಧ | ಸಚಿವ ಪ್ರಿಯಾಂಕ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ: ಸಿಎಂ ಸಿದ್ದರಾಮಯ್ಯ

15/10/2025, 18:47

ಮೈಸೂರು(reporterkarnataka.com): ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದರು.


ಅವರು ಇಂದು ಮೈಸೂರು ಏರ್ ಪೋರ್ಟ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದು ಈ ಕುರಿತ ಆಡಿಯೋ ಕೂಡ ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು,ತಮಿಳುನಾಡಿನಲ್ಲಿ ಆರ್.ಎಸ್.ಎಸ್.
ನಿಷೇಧದ ಬಗ್ಗೆ ಮಾಹಿತಿ ಪಡೆಯಲು ಸೂಚನೆ ನೀಡಲಾಗಿದೆ.
ತಮಿಳುನಾಡಿನಲ್ಲಿ ಯಾವ ರೀತಿ ನಿಷೇಧ ಹೇರಲಾಗಿದೆ ಎಂಬ ಬಗ್ಗೆ ಮಾಹಿತಿ ತರಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಅದನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದ ಅವರು ಪ್ರಿಯಾಂಕ ಖರ್ಗೆಯವರಿಗೆ ರಕ್ಷಣೆ ಒದಗಿಸಲಾಗುವುದು ಎಂದರು.

*ಬೆದರಿಕೆಗೆ ಹೆದರುವುದಿಲ್ಲ:*
ದುಷ್ಟ ಶಕ್ತಿಗಳು ಯಾವಾಗಲೂ ಇಂಥದ್ದೇ ಕೆಲಸ ಮಾಡುವುದು. ಬೆದರಿಕೆಗಳಿಗೆ ಪ್ರಿಯಾಂಕ ಅವರು ಹೆದರುವುದಿಲ್ಲ. ನಾನೂ ಹೆಸದರುವುದಿಲ್ಲ ಎಂದರು.

*ಸಮೀಕ್ಷೆ: ಬೆಂಗಳೂರು ನಗರ ಬಿಟ್ಟರೆ ಬೇರೆಲ್ಲಿಯೂ ಶೇಕಡಾವಾರು ಪ್ರಮಾಣದಲ್ಲಿ ಕಡಿಮೆಯಾಗಿಲ್ಲ:*
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ತಡವಾಗುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಬೆಂಗಳೂರು ನಗರ ಬಿಟ್ಟರೆ ಬೇರೆಲ್ಲಿಯೂ ಶೇಕಡಾವಾರು ಪ್ರಮಾಣದಲ್ಲಿ ಕಡಿಮೆಯಾಗಿಲ್ಲ ಎಂದರು.

*ಎಲ್ಲ ಶಾಸಕರಿಗೂ ಅನುದಾನ:*
ಶಾಸಕರಿಗೆ ಅನುದಾನ ನೀಡುವಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಉಚ್ಚ ನ್ಯಾಯಾಲಯಕ್ಕೆ ಶ್ರೀನಿವಾಸಪುರ ಶಾಸಕರು ಮೊರೆ ಹೋಗಿರುವ ಬಗ್ಗೆ ಮಾತನಾಡಿ ಜೆಡಿಎಸ್ ನವರು ನಮ್ಮ ಶಾಸಕರಿಗೆ ಅನುದಾನ ನೀಡಿದ್ದರೇ ? ಎಂದು ಪ್ರಶ್ನಿಸಿದರು.
ರಾಜ್ಯದ ಸರ್ವತೋಮುಖ ಅಭಿವೃದ್ಧಿಯಾಗಬೇಕಿದ್ದು, ಎಲ್ಲರಿಗೂ ಅನುದಾನ ಒದಗಿಸಲಾಗುತ್ತಿದೆ ಎಂದರು.
ಮೈಸೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.
ಬಿಜೆಪಿಯವರು ತಾಕತ್ತಿದ್ದರೆ ಆರ್.ಎಸ್.ಎಸ್. ಮೇಲೆ ನಿಷೇಧ ಹೇರಲಿ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಚುನಾವಣಾ ಸಂದರ್ಭದಲ್ಲಿಯೂ ಬಿಜೆಪಿಯವರು ತಾಕತ್ತಿದ್ದರೆ ಬನ್ನಿ ಎಂದಿದ್ದರು. ಆದರೆ ಸೋತು ಹೋದರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು