5:50 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ ರೈತನ ಚಿಕಿತ್ಸೆಗೆ ಸರ್ಕಾರದ ವೆಚ್ಚ

17/10/2025, 19:32

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಮೈಸೂರಿನ ಹೆಚ್.ಡಿ. ಕೋಟೆಯ ಬಡಗಲಾಪುರದಲ್ಲಿ ಹುಲಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಮಹದೇವಗೌಡ ಅವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ, ಅಲ್ಲದೇ, ಈಗಾಗಲೇ ಕುಟುಂಬಕ್ಕೆ ಸಂಪೂರ್ಣ ಪರಿಹಾರದ ಮೊತ್ತ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ
ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕಿತ್ಸೆ ಪಡೆಯುತ್ತಿರುವ ಮಹದೇವಗೌಡ ಅವರ ಕುಟುಂಬದವರ ಜೊತೆ ಚರ್ಚಿಸಿದ ಬಳಿಕ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ, ಈ ಸಮಯದಲ್ಲಿ ಮಹದೇವಗೌಡ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ. ಅದರ ಜೊತೆಗೆ ಪರಿಹಾರದ ಮೊತ್ತವನ್ನು ಸಂಪೂರ್ಣವಾಗಿ ಬಿಡುಗಡೆಗೊಳಿಸಲು ಸಿಎಂ ಸೂಚನೆ‌ ಕೊಟ್ಟಿದ್ದಾರೆ.

*ದೃಷ್ಟಿ ಮರಳಿ ಬರುವ ಸಾಧ್ಯತೆ ಇಲ್ಲ:* ಇನ್ನು ಎರಡು ಕಣ್ಣುಗಳ ದೃಷ್ಟಿ ಮತ್ತೆ ಬರುವ ಸಾಧ್ಯತೆ ಇಲ್ಲ ಎಂದು ವೈದ್ಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪರಿಹಾರವನ್ನು ಗಾಯಾಳು ಲೆಕ್ಕದಲ್ಲಿ ಕೊಡಬಾರದು. ಬದುಕು ಕಳೆದುಕೊಂಡ, ಕುಟುಂಬದ ಆಸರೆ ಕಳೆದುಕೊಂಡವರ ಲೆಕ್ಕದಲ್ಲಿ ಪೂರ್ತಿ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

*ಏನಿದು ಪ್ರಕರಣ?:*
ಕಾಡಂಚಿನ ಗ್ರಾಮಗಳಲ್ಲಿ ಉಪಟಳ ನೀಡುತ್ತಿದ್ದ ಹುಲಿ ಸೆರೆಗೆಂದು ಕೂಂಬಿಂಗ್ ನಡೆಸುತ್ತಿದ್ದಾಗ ಹತ್ತಿರದಲ್ಲೇ ಹತ್ತಿ ಬಿಡಿಸುತ್ತಿದ್ದ ರೈತನ ಮೇಲೆ ವ್ಯಾಘ್ರ ಅಟ್ಯಾಕ್‌ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿತ್ತು. ಈ ತೀವ್ರ ದಾಳಿಯಿಂದಾಗಿ ರೈತನ ಮುಖ ಛಿದ್ರಛಿದ್ರವಾಗಿದೆ.
ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಬಡಗಲಪುರದಲ್ಲಿ ನಡೆದಿದೆ. ಮೈಸೂರು ದಸರಾದ ಜನಪ್ರಿಯ ಆನೆ ಭೀಮನನ್ನು ಬಳಸಿ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದಾಗ ಈ ದುರ್ಘಟನೆ ನಡೆದಿತ್ತು. ಅಲ್ಲೇ ಹತ್ತಿರದ ಜಮೀನಿನಲ್ಲಿ ಹತ್ತಿ ಬಿಡಿಸುತ್ತಿದ್ದ ರೈತ ಮಾದೇಗೌಡನ ಮೇಲೆ ವ್ಯಾಘ್ರ ಎರಗಿದೆ. ತೀವ್ರವಾಗಿ ಗಾಯಗೊಂಡ ಅವರನ್ನು ಹತ್ತಿರದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಮೈಸೂರಿಗೆ ರವಾನೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ನುಗು ವನ್ಯಜೀವಿ ವಲಯದ ಅರಣ್ಯ ಪ್ರದೇಶದ ಕಾಡಂಚಿನ ಗ್ರಾಮಗಳಲ್ಲಿ ಕಳೆದ ವಾರದಿಂದ ಹುಲಿ ಕಾಣಿಸಿಕೊಂಡು ಜನರಲ್ಲಿ ಆತಂಕ ಸೃಷ್ಟಿಸಿತ್ತು. ಇದರಿಂದಾಗಿ ಗ್ರಾಮಸ್ಥರು ಹುಲಿ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಅರಣ್ಯ ಇಲಾಖೆ 4-5 ದಿನಗಳಿಂದ ಹುಲಿ ಸೆರೆಗಾಗಿ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿತ್ತು. ಇದಲ್ಲದೆ ಬೋನ್ ಇರಿಸಿತ್ತು.
ಗುರುವಾರ ಮತ್ತೆ ಕೂಂಬಿಂಗ್ ಕಾರ್ಯಾಚರಣೆ ನಡೆಸುವಾಗ ಹುಲಿಯು ಗ್ರಾಮದ ಬೋಳೆಗೌಡನಕಟ್ಟೆ ಕೆರೆ ಬಳಿ ಅವಿತು ಕುಳಿತಿತ್ತು. ಇದನ್ನು ಕಂಡ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಬಳಿ ಯಾರು ಹೋಗದಂತೆ ಎಚ್ಚರಿಕೆ ನೀಡಿದ್ದರು. ಆದರೆ ಹುಲಿ ಗಾಬರಿಗೊಂಡು ಕುಮಾರ್ ಎಂಬುವರ ತೋಟದ ಕಡೆಗೆ ಓಡಿದೆ. ನಂತರ ಅಲ್ಲಿಂದ ನುಗು ಅರಣ್ಯದ ಕಡೆಗೆ ಓಡಿ ಹೋಗಿ ಪೊದೆಯಲ್ಲಿ ಅವಿತು ಕುಳಿತಿತ್ತು.
ಹುಲಿ ಸೆರೆಗೆ ಸಾಕಾನೆಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸುತ್ತಿದ್ದಾಗ ಹೆದರಿ ಪೊದೆಯಿಂದ ಆಚೆ ಬಂದ ಹುಲಿ ಕಾಡಿನತ್ತ ಓಡಿದೆ. ಆಗ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹದೇವ್ ಅವರ ಮೇಲೆ ದಾಳಿ ಮಾಡಿದೆ. ಮಹದೇವ್‌ ಅವರ ಮುಖ, ಕೈ, ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು ತೀವ್ರ ರಕ್ತಸ್ರಾವದಿಂದ ಅಲ್ಲೇ ಕುಸಿದು ಬಿದ್ದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು