4:54 AM Sunday14 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಬಿಲ್ಲವರು, ಮೊಗವೀರರು ಪಕ್ಷ ಬೇಧ ಮರೆತು ಒಂದಾಗಬೇಕು; ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬ ಬೇಕು: ಮೊಗವೀರ ರತ್ನ, ನಾಡೋಜ ಡಾ.ಜಿ.ಶಂಕರ್

19/10/2025, 13:35

ಮಂಗಳೂರು(reporterkarnataka.com): ಮಂಗಳೂರು ದಸರಾ ಗೌರವ ಸಮ್ಮಾನ್ 2025 ಪ್ರಶಸ್ತಿ ಸ್ವೀಕರಿಸಲು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಆಗಮಿಸಿದ ಹಿಂದುಳಿದ ವರ್ಗಗಳ ನಾಯಕ ಮೊಗವೀರ ರತ್ನ ನಾಡೋಜ ಡಾ. ಜಿ. ಶಂಕರ್ ರವರು ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ವಂದಿಸಿ ಕ್ಷೇತ್ರದ ದೇವರ ದರ್ಶನ ಮಾಡಿದರು.

ಬಿಲ್ಲವರು ಮತ್ತು ಮೊಗವೀರ ಸಮಾಜ ರಾಜಕೀಯ ರಹಿತವಾಗಿ ಒಂದಾಗಬೇಕು. ಬಿಲ್ಲವ ಸಮಾಜ ಮತ್ತು ಮೊಗವೀರ ಸಮಾಜದ ನಡುವೆ ರಾಜಕೀಯ ಪ್ರಜ್ಞೆಯ ಕೊರತೆಯಿಂದ ಬಿಲ್ಲವ ಸಮಾಜದ ಅಭ್ಯರ್ಥಿಗಳು ಚುನಾವಣೆ ನಿಂತಾಗ ಮೊಗವೀರ ಸಮಾಜ ಸ್ಪಂದಿಸಲಿಲ್ಲ. ಅದೇ ರೀತಿ ಮೊಗವೀರ ಸಮಾಜ ಚುನಾವಣೆಗೆ ನಿಂತಾಗ ಬಿಲ್ಲವ ಸಮಾಜ ಸ್ಪಂದಿಸಲಿಲ್ಲ, ಇದರಿಂದಾಗಿ ಬಿಲ್ಲವ ಸಮಾಜಕ್ಕೆ ಮತ್ತು ಮೊಗವೀರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ಇಲ್ಲದೆ ಸಮಾಜದ ಅಭಿವೃದ್ಧಿಗೆ ತೊಂದರೆ ಆಗುತ್ತದೆ. ಮಂಗಳೂರು ಲೋಕಸಭಾ ಅಭ್ಯರ್ಥಿ ಉದಯೋನ್ಮುಖ ಪದ್ಮರಾಜ್ ಆರ್ ಪೂಜಾರಿ ಗೆಲ್ಲ ಬೇಕಿತ್ತು. ಬಿಲ್ಲವ ಸಮಾಜಕ್ಕೆ ಆದ ನಷ್ಟ. ಮುಂದಿನ ದಿನಗಳಲ್ಲಿ ಬಿಲ್ಲವ ಮತ್ತು ಮೊಗವೀರ ಸಮಾಜದ ವ್ಯಕ್ತಿಗಳು ಯಾವುದೇ ಪಕ್ಷದಲ್ಲಿ ನಿಂತರೂ ನಾವು ಪಕ್ಷ ಭೇಧ ಮರೆತು ಒಂದಾಗ ಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು