2:27 AM Monday9 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

Bantwal | ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ಸರಸ್ವತಿ ಮಂಟಪ ಲೋಕಾರ್ಪಣೆ

19/10/2025, 22:47

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಧರ್ಮಾಚರಣೆಯಿಂದ ಪ್ರಪಂಚಕ್ಕೆ ಶ್ರೇಯಸ್ಸು ಉಂಟಗುತ್ತದೆ. ಧರ್ಮದಿಂದಲೇ ಸುಖ, ಸಂಪತ್ತು ಸಿದ್ಧಿಸುವುದು. ವಿಜ್ಞಾನದ ಬೆಳವಣಿಗೆಯಿಂದ ಜಗತ್ತಿನಲ್ಲಿ ಹಲವಾರು ಸೌಕರ್ಯಗಳಿದ್ದರೂ‌ ಅಧರ್ಮದಿಂದ ದುಃಖಕ್ಕೆ ಕಾರಣವಾಗಿದೆ. ಭಾರತೀಯ ಧರ್ಮ ಪ್ರಪಂಚಕ್ಕೆ ಆಧಾರವಾಗಿದ್ದು, ಸನಾತನ ಧರ್ಮ ರಕ್ಷಣೆಯಾಗಬೇಕು. ಧರ್ಮ ಪಾಲನೆಯಿಂದಿಗೆ ಧರ್ಮ ರಕ್ಷಣೆಯನ್ನು ಎಲ್ಲರೂ ಮಾಡಬೇಕಾಗಿದೆ. ವಿದ್ಯಾ ಸಂಪತ್ತು ಎಲ್ಲಾ ಸಂಪತ್ತಿಗಿಂತಲೂ ಶ್ರೇಷ್ಠವಾಗಿದೆ ಎಂದು ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀ ಶಂಕರ ಮಹಾ ಸಂಸ್ಥಾನದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾ ಸ್ವಾಮಿಗಳವರು ಹೇಳಿದರು.


ಅವರು ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದ ಸರಸ್ವತಿ ಮಂಟಪ ಮತ್ತು ಶಂಕರಾಚಾರ್ಯ ಸಭಾ ಮಂಟಪ ಲೋಕಾರ್ಪಣೆ ಮಾಡಿ‌ದ ಬಳಿಕ ಕಲ್ಲಡ್ಕ ಶ್ರೀ ರಾಮ ಮಂದಿರದಲ್ಲಿ ಏರ್ಪಡಿಸಲಾದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಶೃಂಗೇರಿ ಮಹಾಸಂಸ್ಥಾನದ ಪರಮಪೂಜ್ಯರು
ಶ್ರೀರಾಮ ಶಿಶುಮಂದಿರ ಹಾಗೂ ಶ್ರೀರಾಮ ಪ್ರಾಥಮಿಕ ಶಾಲಾ ಮುಂಭಾಗದಲ್ಲಿ ನೂತನವಾಗಿ ನಿರ್ಮಿಸಿದ ಶಿಲಾಮಯ ಸರಸ್ವತಿ ಮಂಟಪದ ಪರದೆ ಅನಾವರಣಗೊಳಿಸಿ ಅಮೃತ ಶಿಲೆಯಲ್ಲಿ ನಿರ್ಮಿತವಾದ ಸರಸ್ವತಿ ದೇವಿಗೆ ಪೂಜೆ ಸಲ್ಲಿಸಿ, ಆರತಿ ಬೆಳಗಿದರು.
ಬಳಿಕ ಶಿಶು ಮಂದಿರ ಮತ್ತು ಪೂರ್ವಗುರುಕುಲದ ಮಕ್ಕಳ ಚಟುವಟಿಕೆಗಳನ್ನು ವೀಕ್ಷಿಸಿ ಮಾಹಿತಿ ಪಡೆದರು.
ಶ್ರೀರಾಮ ಇಂಗ್ಲೀಷ್ ಮಾಧ್ಯಮದ ನೂತನ ಸಭಾಭವನ ‘ಶಂಕರಾಚಾರ್ಯ’ವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಅವರು ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ಶಾಲಾ ಪರಿಸರದಲ್ಲಿರುವ ಗೋಶಾಲೆಗೆ ತೆರಳಿ ಹಸುಗಳಿಗೆ ಮೇವು ನೀಡಿದರು. ಮಕ್ಕಳ ಉದ್ಯಾನವನ ವೀಕ್ಷಿಸಿದರು.
ವಿದ್ಯಾಕೇಂದ್ರದ ದೈನಂದಿನ ಚಟುವಟಿಕೆ ಸರಸ್ವತಿ ವಂದನೆ ಬಳಿಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಗಣ್ಯರನ್ನು ಸ್ವಾಗತಿಸಿದರು.
ಶ್ರೀಸಂಸ್ಥಾನದವರು ವಿದ್ಯೆಯ ಜೊತೆಗೆ ಸಂಸ್ಕಾರವು ವ್ಯಕ್ತಿಗೆ ಭೂಷಣ. ಶಿಕ್ಷಣದ ಜೊತೆಗೆ ಸಂಸ್ಕಾರಕ್ಕೂ ಪ್ರಾಶಸ್ತ್ಯ ನೀಡುತ್ತಾ ಧರ್ಮದ ರಕ್ಷಣೆಯಲ್ಲಿ ತೊಡಗಬೇಕು ಎಂದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಕುಟುಂಬ ಪ್ರಭೋದನ್ ಪ್ರಮುಖರಾದ ಕಜಂಪಾಡಿ ಸುಬ್ರಹ್ಮಣ್ಯ ಭಟ್, ಮುಂಬೈ ಉದ್ಯಮಿಗಳಾದ ರವಿಕಾಂತ ಮಿಶ್ರ, ವಿಜಯ ಕಲಾಂತ್ರಿ, ನವದೆಹಲಿಯ ಉದ್ಯಮಿ ಸಿದ್ಧಾರ್ಥ, ಬೆಂಗಳೂರಿನ ಉದ್ಯಮಿಗಳಾದ ಅಂಜನಾ ಕಿಣಿ, ಗಿರೀಶ್ ರಾವ್, ಬಾಲಕೃಷ್ಣ ಭಂಡಾರಿ, ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರೀರಾಮ ವಿದ್ಯಾಕೇಂದ್ರದ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಕೃಷ್ಣಪ್ರಸಾದ್ ಕಾಯರಕಟ್ಟೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು