8:22 AM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

20ಗಂಟೆಯೊಳಗೆ ಕಳ್ಳರನ್ನು ಬಂಧಿಸಿದ ಪೊಲೀಸರು ; ಮೂರು ಮನೆಯಿಂದ 20ಲಕ್ಷ ಮೌಲ್ಯದ ಕಳವು ಮಾಡಿದ್ದ ಖದೀಮರು ಅಂದರ್ !

21/10/2025, 19:21

ಮಂಗಳೂರು(reporterkarnataka.com): ಮಂಗಳೂರು ಲಾಲ್ ಬಾಗ್ ಹ್ಯಾಟ್ ಹಿಲ್‌ನ ಅಪಾರ್ಟ್‌ಮೆಂಟ್‌ನಲ್ಲಿ ನಡೆದ ₹20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಾಗೂ ವಿದೇಶಿ ಕರೆನ್ಸಿ ಕಳವು ಪ್ರಕರಣವನ್ನು ಉರ್ವಾ ಪೊಲೀಸರು ಕೇವಲ 20 ಗಂಟೆಗಳಲ್ಲಿ ಪತ್ತೆಹಚ್ಚಿ ಇಬ್ಬರು ಅಸ್ಸಾಂ ಮೂಲದ ಕಳ್ಳರಾದ ಅಭಿಜಿತ್ ದಾಸ್ (24) ಮತ್ತು ದೇಬಾ ದಾಸ್ (21)ರನ್ನು ಬಂಧಿಸಿದ್ದಾರೆ.

ಅ.19ರ ರಾತ್ರಿ ಕಳ್ಳರು ಮೂರು ಫ್ಲಾಟ್‌ಗಳಿಗೆ ನುಗ್ಗಿ ಚಿನ್ನಾಭರಣ, ₹5,000 ನಗದು, 3,000 ದಿರ್ಹಾಮ್ ಹಾಗೂ ಮೊಬೈಲ್‌ಫೋನ್ ಕಳವು ಮಾಡಿದ್ದರು. ರಿಯಾಜ್ ರಶೀದ್ ಅವರ ದೂರಿನ ಮೇರೆಗೆ ಪ್ರಕರಣ ದಾಖಲಾದ ಬಳಿಕ ಪೊಲೀಸರು ಶ್ವಾನ ದಳ ಹಾಗೂ ಫಿಂಗರ್‌ಪ್ರಿಂಟ್ ತಜ್ಞರ ಸಹಾಯದಿಂದ ತನಿಖೆ ಆರಂಭಿಸಿದರು.

ಮಂಗಳೂರು ಉರ್ವಾ ಠಾಣಾ ತಂಡವು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಬೆಂಗಳೂರಿನಲ್ಲಿ ಬಂಧನ ಕಾರ್ಯಾಚರಣೆ ನಡೆಸಿ ಕಳವು ಮಾಡಿದ ಎಲ್ಲಾ ವಸ್ತುಗಳನ್ನು ವಶಕ್ಕೆ ಪಡೆದಿದೆ. ಆರೋಪಿಗಳಲ್ಲಿ ಒಬ್ಬನಾದ ಅಭಿಜಿತ್ ದಾಸ್ ವಿರುದ್ಧ ಹಿಂದೆಯೂ ಬೆಂಗಳೂರು ಹಾಗೂ ಅಸ್ಸಾಂ ರಾಜ್ಯಗಳಲ್ಲಿ ಮನೆ ಕಳ್ಳತನ ಪ್ರಕರಣಗಳು ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗೆ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಈ ಕಾರ್ಯಾಚರಣೆಯನ್ನು ಡಿ.ಸಿ.ಪಿ. (ಕ್ರೈಂ) ಅವರ ಮೇಲ್ವಿಚಾರಣೆಯಲ್ಲಿ ಉರ್ವಾ ಠಾಣಾ ಸಿಬ್ಬಂದಿ ಯಶಸ್ವಿಯಾಗಿ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು