3:31 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ, ಮತ್ತೋರ್ವ ಪರಾರಿ

22/10/2025, 13:44

ಪುತ್ತೂರು(reporterkarnataka.com): ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಐಷರ್ ವಾಹನವನ್ನು ತಡೆಯಲು ಯತ್ನಿಸಿದ ಪೊಲೀಸರ ಜೀಪಿಗೆ ಡಿಕ್ಕಿ ಹೊಡೆದು ಕೊಲೆಯತ್ನ ನಡೆಸಿದ ಆರೋಪಿಯನ್ನು ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದ ಘಟನೆ ಬುಧವಾರ ಮುಂಜಾನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಮಂಗಳ ಎಂಬಲ್ಲಿ ನಡೆದಿದೆ.


ಕೇರಳದ ಕಾಸರಗೋಡು ಮೂಲದ ಅಬ್ದುಲ್ಲಾ (40) ಗುಂಡೇಟಿನಿಂದ ಗಾಯಗೊಂಡ ಆರೋಪಿ ಆರೋಪಿಯ ಕಾಲಿಗೆ ಗುಂಡು ಬಿದ್ದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುಧವಾರ ಮುಂಜಾನೆ ಈಶ್ವರಮಂಗಳ ಭಾಗದಲ್ಲಿ ಅಬ್ದುಲ್ಲಾ ಎಂಬಾತ ಚಲಾಯಿಸುತ್ತಿದ್ದ ಐಷರ್ ವಾಹನದಲ್ಲಿ ಸುಮಾರು 10 ಜಾನುವಾರುಗಳನ್ನು ಅನಧಿಕೃತವಾಗಿ ಸಾಗಿಸಲಾಗುತ್ತಿತ್ತು. ವಾಹನದಲ್ಲಿ ಇನ್ನೊಬ್ಬ ಆರೋಪಿಯೂ ಇದ್ದನು. ಈ ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಚಾಲಕ ಅಬ್ದುಲ್ಲಾ ವಾಹನ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ.
ಸುಮಾರು 10 ಕಿ.ಮೀ. ದೂರದವರೆಗೆ ಪೊಲೀಸರು ವಾಹನವನ್ನು ಬೆನ್ನಟ್ಟಿದ್ದಾರೆ. ಈ ವೇಳೆ ಆರೋಪಿಯು ಪೊಲೀಸರ ಜೀಪಿಗೆ ಹಿಂಬದಿಯಿಂದ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿದ್ದಾನೆ.
ಪರಿಸ್ಥಿತಿಯ ಗಂಭೀರತೆಯನ್ನು ಮನಗಂಡ ಪಿಎಸ್‌ಐ ಅವರು ಆತ್ಮರಕ್ಷಣೆ ಹಾಗೂ ಆರೋಪಿಯನ್ನು ಹಿಡಿಯುವ ಸಲುವಾಗಿ ಎರಡು ಸುತ್ತು ಗುಂಡು ಹಾರಿಸಿದ್ದಾರೆ. ಅದರಲ್ಲಿ ಒಂದು ಗುಂಡು ಐಷರ್ ವಾಹನದ ಮೇಲೆ ಬಿದ್ದರೆ, ಮತ್ತೊಂದು ಗುಂಡು ಚಾಲಕ ಅಬ್ದುಲ್ಲಾ ಕಾಲಿಗೆ ತಗುಲಿದೆ. ಗುಂಡೇಟಿನಿಂದ ವಾಹನ ನಿಂತ ಕೂಡಲೇ ಅದರಲ್ಲಿದ್ದ ಮತ್ತೋರ್ವ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಗಾಯಗೊಂಡ ಆರೋಪಿ ಅಬ್ದುಲ್ಲಾನನ್ನು ತಕ್ಷಣವೇ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಆರೋಪಿ ಅಬ್ದುಲ್ಲಾ ಈ ಹಿಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಗೋ ಹತ್ಯೆ ಕಾಯ್ದೆಯಡಿಯಲ್ಲಿಪ್ರಕರಣ ದಾಖಲಾಗಿರುತ್ತದೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಪರಾರಿಯಾದ ಮತ್ತೊಬ್ಬ ಆರೋಪಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು