ಇತ್ತೀಚಿನ ಸುದ್ದಿ
ಸುರತ್ಕಲ್: ಇಬ್ಬರಿಗೆ ಚೂರಿ ಇರಿದ ಪ್ರಕರಣ; 4 ಮಂದಿ ಆರೋಪಿಗಳ ಬಂಧನ
24/10/2025, 21:11
ಮಂಗಳೂರು(reporterkarnataka.com): ಸುರತ್ಕಲ್ ಸಮೀಪದ ಕಾನಾ ಬಳಿ ಇಬ್ಬರಿಗೆ ಚೂರಿ ಇರಿದ ಪ್ರಕರಣ ಸಂಬಂಧಿಸಿದಂತೆ 4 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸುಶಾಂತ್ (29), ಕೆ ವಿ. ಅಲೆಕ್ಸ್(27), ನಿತಿನ್(26) ಹಾಗೂ ಆರುಣ್ ಶೆಟ್ಟಿ(56) ಎಂದು ಗುರುತಿಸಲಾಗಿದೆ.
ಗುರುವಾರ ರಾತ್ರಿ ಸುಮಾರು 10-30 ಗಂಟೆಗೆ ಸುರತ್ಕಲ್ ಕಾನಾ ಬಳಿಯ ದೀಪಕ್ ಭಾರ್ ಬಳಿಯಲ್ಲಿ ಕ್ಷುಲಕ ಕಾರಣಕ್ಕಾಗಿ ಹಸನ್ ಮುಕ್ಷಿತ್ ಮತ್ತು ನಿಝಾಂ ಎಂಬ ಯುವಕರಿಬ್ಬರಿಗೆ ಗುರುರಾಜ್ ಆಚಾರಿ, ಅಲೆಕ್ಸ್ ಸಂತೋಷ್,ನಿತಿನ್ ಮತ್ತು ಸುಶಾಂತ್ ಸೇರಿಕೊಂಡು ಚೂರಿಯಿoದ ಇರಿದು ಕೊಲೆಗೆ ಯತ್ನಿಸಿದ್ದರು. ಈ ಪೈಕಿ ಈ ಪ್ರಕರಣದಲ್ಲಿ ಭಾಗಿಯಾದ ಪ್ರಮುಖ ಆರೋಪಿ ಗುರುರಾಜ್ ಆಚಾರಿ ಹಾಗೂ ಆರೋಪಿಗಳಿಗೆ ಅರುಣ್ ಶೆಟ್ಟಿಯೊಂದಿಗೆ ಅಶ್ರಯ ನೀಡಿದ ಅಶೋಕ್ ಎಂಬಾತನು ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
ಪ್ರಕರಣದ ಆರೋಪಿತರ ಪತ್ತೆಯ ಬಗ್ಗೆ ರವಿಶಂಕರ್, ಮಾನ್ಯ ಉಪ ಪೊಲೀಸ್ ಆಯುಕ್ತರು (ಅಪರಾಧ ಮತ್ತು ಸಂಚಾರ) ರವರ ನಿರ್ದೇಶನದಂತೆ, ಮಾನ್ಯ ಸಹಾಯಕ ಪೊಲೀಸ್ ಆಯುಕ್ತರು (ಉತ್ತರ ಉಪ ವಿಭಾಗ) ಶ್ರೀಕಾಂತ್ ಕೆ ರವರ ಮಾರ್ಗದರ್ಶನದಲ್ಲಿ, ಸುರತ್ಕಲ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಪ್ರಮೋದ್ ಕುಮಾರ್ ಪಿ ರವರ ನೇತೃತ್ವದಲ್ಲಿ ಪಿಎಸ್ಐ ಗಳಾದ ರಾಘವೇಂದ್ರ ನಾಯ್ಕ್, ಜನಾರ್ಧನ ನಾಯ್ಕ್, ಶಶಿಧರ ಶೆಟ್ಟಿ, ಎಎಸ್.ಐ ರವರಾದ ರಾಜೇಶ್ ಆಳ್ವ, ತಾರನಾಥ, ರಾಧಾಕೃಷ್ಣ, ಹಾಗೂ ಸಿಬ್ಬಂದಿಯವರಾದ ಅಣ್ಣಪ್ಪ, ಉಮೇಶ್ ಕುಮಾರ್, ತಿರುಪತಿ, ಅಜಿತ್ ಮ್ಯಾಥ್ಯೂ, ರಾಮು ಕೆ, ಕಾರ್ತೀಕ್, ವಿನೋದ್ ರವರು ಹಾಗೂ ಸಿಸಿಬಿ ಘಟಕದ ಅಧಿಕಾರಿ/ಸಿಬ್ಬಂದಿಯವರು ಹಾಗೂ ಎಸ್ ಎ ಎಫ್ ತಂಡದವರು ಮತ್ತು ಶ್ವಾನ ದಳದವರು ಪಾಲ್ಗೊಂಡಿದ್ದರು.














