12:59 PM Sunday27 - September 2026
ಬ್ರೇಕಿಂಗ್ ನ್ಯೂಸ್
ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ*

ಇತ್ತೀಚಿನ ಸುದ್ದಿ

ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್ಐಆರ್: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

27/10/2025, 17:55

ಮಂಗಳೂರು(reporterkarnataka.com): ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.


ಅವರು ಇಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಆರೆಸ್ಸೆಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್ ಐ ಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ ಮಾತನಾಡಿದ್ದಾರೆ ಎಂದರು.

*ಎಸ್ ಐ ಟಿ ವರದಿ:*
ಧರ್ಮಸ್ಥಳ ಪ್ರಕರಣದ ಬಗ್ಗೆ ಎಸ್ ಐ ಟಿ ವರದಿ ಸಲ್ಲಿಕೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಎಸ್ ಐ ಟಿ ಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಈ ತಿಂಗಳಾಂತ್ಯದಲ್ಲಿ ಎಸ್ ಐ ಟಿ ವರದಿಯ ಸಲ್ಲಿಕೆಯಾಗಲಿದೆ ಎಂದು ಎಸ್ ಐ ಟಿ ತಿಳಿಸಿರುವುದಾಗಿ ಗೃಹ ಸಚಿವರು ತಿಳಿಸಿರುವುದಾಗಿ ಹೇಳಿದರು.

*ವಾಹನ ಸೌಲಭ್ಯ:*
ವಾರ್ತಾ ಇಲಾಖೆಗೆ ವಾಹನ ಸೌಲಭ್ಯದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಪತ್ರಕರ್ತರ ಅನುಕೂಲಕ್ಕಾಗಿ ವಾರ್ತಾ ಇಲಾಖೆ ವಾಹನ ಒದಗಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

*ಹೈಕಮಾಂಡ್ ನದೇ ಅಂತಿಮ ತೀರ್ಮಾನ:*
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿವಿಧ ಸಚಿವರು ಹೇಳಿಕೆ ನೀಡುತ್ತಿರುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾ, ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ಗೆ ಸೇರಿದ್ದಾಗಿದೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು