ಇತ್ತೀಚಿನ ಸುದ್ದಿ
Bangaluru | ಜಾಗೃತಿ ಅರಿವು ಸಪ್ತಾಹ-2025: ಭ್ರಷ್ಟಾಚಾರದ ವಿರುದ್ಧ ಮುಖ್ಯಮಂತ್ರಿ ಪ್ರತಿಜ್ಞೆ ಬೋಧನೆ
27/10/2025, 19:06
ಬೆಂಗಳೂರು(reporterkarnataka.com): ಜಾಗೃತಿ ಅರಿವು ಸಪ್ತಾಹ-20225ರ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವಾಲಯದ ಎಲ್ಲಾ ಅಧಿಕಾರಿಗಳು ಹಾಗೂ ನೌಕರರಿಗೆ ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞಾ ವಚನವನ್ನು ಬೋಧಿಸಿದರು.



ಈ ಸಂದರ್ಭದಲ್ಲಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿ ಜಗದೀಶ್ ಸೇರಿದಂತೆ, ಸಚಿವಾಲಯದ ಅಧಿಕಾರಿಗಳು ಹಾಗೂ ನೌಕರರು ಉಪಸ್ಥಿತರಿದ್ದರು.












