6:30 AM Friday19 - December 2025
ಬ್ರೇಕಿಂಗ್ ನ್ಯೂಸ್
ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ

ಇತ್ತೀಚಿನ ಸುದ್ದಿ

ಮತ ಚೋರಿ ತಡೆಗೆ ಕೈ ಕಾರ್ಯಪಡೆ!: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೆಬ್ಬಾಳ ಕ್ಷೇತ್ರದಲ್ಲಿ ಪಡೆ ಸಜ್ಜು

27/10/2025, 20:27

•ಕ್ಷೇತ್ರದ ಶಾಸಕ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಘೋಷಣೆ

•3 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಡಾಂಬರೀಕರಣಕ್ಕೆ ಚಾಲನೆ

ಬೆಂಗಳೂರು(reporterkarnataka.com): ದೇಶಾದ್ಯಂತ ತೀವ್ರ ವಿವಾದಕ್ಕೆ ಗ್ರಾಸವಾಗಿರುವ ಮತ ಚೋರಿ ಪ್ರಕರಣಗಳನ್ನು ಪತ್ತೆ ಮಾಡಲು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪಡೆಯನ್ನು ರಚಿಸುವುದಾಗಿ ಕ್ಷೇತ್ರದ ಶಾಸಕರೂ ಆಗಿರುವ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.


ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಸುಲ್ತಾನ್ ಪಾಳ್ಯ ಮುಖ್ಯ ರಸ್ತೆ, ಗಂಗಾನಗರದ 1ನೇ ಮುಖ್ಯ ರಸ್ತೆ ಮತ್ತು ಆನಂದನಗರದ ಏಟ್ರಿಯಾ ಕಾಲೇಜ್ ರಸ್ತೆಗಳಿಗೆ ಸುಮಾರು 3 ಕೋಟಿ ರೂಪಾಯಿ ವೆಚ್ಚದಲ್ಲಿ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಮಳೆ ಬಿಡುವು ನೀಡಿದ್ದು, ರಸ್ತೆಗಳ ಗುಂಡಿ ಮುಚ್ಚುವ ಕಾರ್ಯ ಮತ್ತು ರಸ್ತೆಗಳಿಗೆ ಡಾಂಬರೀಕರಣಗೊಳಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.
ಉದ್ಯಾನವನಗಳ ನವೀಕರಣ, ಒಳಚರಂಡಿ ದುರಸ್ತಿ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ಹಂತಹಂತವಾಗಿ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಮತ ಚೋರಿ ಪತ್ತೆಗೆ ಪಡೆ
2023 ರ ವಿಧಾನಸಭೆ ಚುನಾವಣೆಯಲ್ಲಿ ಹೆಬ್ಬಾಳ ಕ್ಷೇತ್ರದಲ್ಲಿಯೂ ಮತಚೋರಿ ಆಗಿದೆ. ಸುಮಾರು 20 ಸಾವಿರಕ್ಕೂ ಅಧಿಕ ಜನರು ಕ್ಷೇತ್ರದಲ್ಲಿ ವಾಸ ಮಾಡದಿದ್ದರೂ ಬೆಂಗಳೂರು ಹೊರವಲಯದಿಂದ ಚುನಾವಣೆ ದಿನ ಬಂದು ಮತ ಚಲಾಯಿಸಿ ಹೋಗಿರುವ ಬಗ್ಗೆ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಮುಂಬರುವ ಗ್ರೇಟರ್ ಬೆಂಗಳೂರು ಪಾಲಿಕೆ ಮತ್ತು ವಿಧಾಸನಭೆ ಚುನಾವಣೆಯಲ್ಲಿ ಈ ಮತಚೋರಿ ಮರಕಳಿಸದಂತೆ ಎಚ್ಚರಿಕೆ ವಹಿಸಲು ಈಗಿನಿಂದಲೇ ನಮ್ಮ ಕಾಂಗ್ರೆಸ್ ಪಕ್ಷದ ವತಿಯಿಂದ ಕಾರ್ಯಪಡೆಯನ್ನು ರಚಿಸಲಾಗುವುದು ಎಂದು ಘೋಷಿಸಿದರು.
ಕಾರ್ಯಪಡೆ ಕಾರ್ಯವ್ಯಾಪ್ತಿ
ಇಡೀ ಹೆಬ್ಬಾಳ ವಿಧಾನಸಭಾ ಕ್ಷೇತ್ರವ್ಯಾಪ್ತಿಯಲ್ಲಿನ ಪ್ರತಿ ವಾರ್ಡ್ ಗಳಿಗೆ ಕಾಂಗ್ರೆಸ್ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಕಾರ್ಯಪಡೆ ಇರಲಿದ್ದು, ಇವುಗಳ ಸದಸ್ಯರು ತಮ್ಮ ವಾರ್ಡ್ ಗಳಿಗೆ ಸಂಬಂಧಿಸಿದಂತೆ ಚುನಾವಣೆ ಆಯೋಗದಿಂದಲೇ ಖಚಿತ ಮತ ಪಟ್ಟಿಯನ್ನು ಪಡೆಯಲಿದ್ದಾರೆ. ಇದರ ಆಧಾರದಲ್ಲಿ ಪ್ರತಿ ಮನೆಗೆ ಭೇಟಿ ನೀಡಿ ಮೂಲ ಮತದಾರರು ಆ ಮನೆಗಳಲ್ಲಿ ವಾಸಿಸುತ್ತಿದ್ದಾರೆಯೇ ಇಲ್ಲವೇ? ಎಂಬುದನ್ನು ಪತ್ತೆ ಮಾಡಲಿದ್ದಾರೆ.
ಆಯೋಗಕ್ಕೆ ಅನರ್ಹರ ಪಟ್ಟಿ
ಹೀಗೆ ಪತ್ತೆ ಮಾಡಲಾದ ಪಟ್ಟಿಯನ್ನು ಮತ್ತೊಮ್ಮೆ ಪರಿಶೀಲನೆ ಮಾಡಿ ಅನರ್ಹ ಮತದಾರರ ಪಟ್ಟಿಯನ್ನು ತಯಾರಿಸಲಾಗುತ್ತದೆ. ಈ ಪಟ್ಟಿಯನ್ನು ಸಕಾಲಕ್ಕೆ ಚುನಾವಣೆ ಆಯೋಗಕ್ಕೆ ಸಲ್ಲಿಸಿ ಅನರ್ಹರನ್ನು ಮತ ಪಟ್ಟಿಯಿಂದ ಕೈಬಿಡುವಂತೆ ಮನವಿ ಮಾಡಲಾಗುತ್ತದೆ ಎಂದು ಸಚಿವರು ವಿವರಣೆ ನೀಡಿದರು.
ಈ ಪ್ರಕ್ರಿಯೆ ನಿರಂತರವಾಗಿ ನಡೆಯಲಿದ್ದು, ಸದ್ಯದಲ್ಲೇ ವಾರ್ಡ್ ಗಳಿಗೆ ಕಾರ್ಯಪಡೆಗಳ ಸದಸ್ಯರನ್ನು ನೇಮಕ ಮಾಡಲಾಗುತ್ತದೆ. ಇದು ಕೇವಲ ಮತ ಚೋರಿ ಪ್ರಕರಣಗಳನ್ನು ಪತ್ತೆ ಮಾಡುವುದಷ್ಟೇ ಅಲ್ಲ. ಮತದಾನ ಹಕ್ಕಿನ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಕಾರ್ಯಪಡೆಯೂ ಆಗಿರುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು