6:04 PM Thursday30 - October 2025
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ Kalburgi | ರಾಘಪುರ ದರ್ಗಾ ಹುಂಡಿ ಕಳವು ಪ್ರಕರಣ: ಮುಧೋಳ್ ಪೊಲೀಸರಿಂದ ಓರ್ವ… New Delhi | ಸೌರ ಗುರಿಸಾಧನೆಯಲ್ಲಿ ಜಿ.20 ರಾಷ್ಟ್ರಗಳ ಪೈಕಿ ಭಾರತವೇ ಮುಂಚೂಣಿ:… ಕೇರಳ ಪ್ರವಾಸಿ ಬಸ್ ಗಳಲ್ಲಿ ಡಿಜೆ ಅಳವಡಿಕೆ: ಶಬ್ದ ಮಾಲಿನ್ಯದ ವಿರುದ್ಧ ಆಕ್ಷೇಪ;… ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿ ಮರೆತಿದೆ, ಒಂದು ಲೇಯರ್‌ ಗೆ 4-5 ಸಾವಿರ… ಮತ ಚೋರಿ ತಡೆಗೆ ಕೈ ಕಾರ್ಯಪಡೆ!: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೆಬ್ಬಾಳ…

ಇತ್ತೀಚಿನ ಸುದ್ದಿ

ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ: ನಾಲ್ವರು ಆರೋಪಿಗಳ ಬಂಧನ

30/10/2025, 17:59

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಾಳು ಮೆಣಸು ಕಳ್ಳತನದ ಎರಡು ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿರುವ ಸೋಮವಾರಪೇಟೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ, ರೂ. 2.4 ಲಕ್ಷ ಮೌಲ್ಯದ 360 ಕೆಜಿ ಕಾಳು ಮೆಣಸು ಹಾಗೂ ಕೃತ್ಯಕ್ಕೆ ಬಳಸಿದ್ದ ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಸೋಮವಾರಪೇಟೆ ವೆಂಕಟೇಶ್ವರ ಬ್ಲಾಕ್ ನಿವಾಸಿ ಸುಮಂತ್, ಕಿಬೆಟ್ಟ ಗ್ರಾಮದ ಕೀರ್ತಿ, ಕೊಣನೂರು ಗ್ರಾಮದ ಮಣಿಕಂಠ ಹಾಗೂ ಕೆ.ಆರ್. ಪೇಟೆಯ ಸಚಿನ್ ಬಂಧಿತ ಆರೋಪಿಗಳಾಗಿದ್ದಾರೆ.
ಆರೋಪಿಗಳು ಕಾಳು ಮೆಣಸಿನ ಚೀಲಗಳನ್ನು ವಾಹನದ ಮೂಲಕ ಸಾಗಿಸುತ್ತಿದ್ದ ವೇಳೆ ಪೊಲೀಸರು ಖಚಿತ ಮಾಹಿತಿ ಆಧಾರದಲ್ಲಿ ಬಲೆ ಬೀಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು