1:44 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

Mangaluru | ಲಯನ್ಸ್ ಜಿಲ್ಲಾ 317D ‘ಸನ್ಮಿತ್ರ’ ಡೈರೆಕ್ಟರಿ ಬಿಡುಗಡೆ

30/10/2025, 19:39

ಮಂಗಳೂರು(reporterkarnataka.com): ರೋಹನ್ ಕಾರ್ಪೊರೇಶನ್ ಸಂಸ್ಥೆಯ ಸ್ಥಾಪಕ ಡಾ.ರೋಹನ್ ಮೊಂತೆರೋ ರವರು ಲಯನ್ಸ್ ಜಿಲ್ಲಾ 317D ರ ‘ಸನ್ಮಿತ್ರ’ ಜಿಲ್ಲಾ ಡೈರೆಕ್ಟರಿಯನ್ನು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಲಯನ್ಸ್ ಕ್ಲಬ್‌ಗಳು ಕೈಗೊಂಡಿರುವ ವಿವಿಧ ಸೇವಾ ಚಟುವಟಿಕೆಗಳನ್ನು ಮೆಚ್ಚಿಕೊಂಡು, “ಲಯನ್ಸ್ ಜಿಲ್ಲಾ 317D ಕೈಗೊಂಡಿರುವ ಸಮಾಜಮುಖಿ ಕಾರ್ಯಕ್ರಮಗಳಿಗೆ ಬೆಂಬಲ ನೀಡಲು ನನಗೆ ಸಂತೋಷವಾಗಿದೆ” ಎಂದು ಹೇಳಿದರು.
ಈ ಜಿಲ್ಲೆಯಲ್ಲಿ ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಾದ್ಯಂತ 120ಕ್ಕೂ ಹೆಚ್ಚು ಕ್ಲಬ್‌ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಲಯನ್ಸ್ ಜಿಲ್ಲಾ ಗವರ್ನರ್ ಕುಡ್ಪಿ ಅರವಿಂದ ಶೆಣೈ, ಜಿಲ್ಲಾ ಖಜಾಂಚಿ ಬಾಲಕೃಷ್ಣ ಹೆಗ್ಡೆ, ಹೆಚ್ಚುವರಿ ಕಾರ್ಯದರ್ಶಿ ಚಂದ್ರಹಾಸ್ ರೈ, ಡೈರೆಕ್ಟರಿ ಸಂಪಾದಕಿ ಗೀತಾ ಕಲ್ಯಾಣಪುರ, ನ್ಯಾನ್ಸಿ ಮಸ್ಕರೆನಸ್, ದಯಾವತಿ ಮೆಂಡೋನ್, ಲಿಡಿಯಾ ಡಿ’ಕೋಸ್ಟಾ, ಹೇಮಾ ರಾವ್, ಸೀಮಾ ಮಯ್ಯಾ ಮತ್ತು ಮೊಹಿದಿನ್ ಕುಂಞಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು