1:45 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಲಾಲ್‌ಬಾಗ್‌ ಉಳಿಸಲು ನವೆಂಬರ್‌ 2ರಂದು ಪ್ರತಿಭಟನೆ: ಪ್ರತಿಪಕ್ಷ ನಾಯಕ ಆರ್.ಅಶೋಕ್

30/10/2025, 22:46

ಬೆಂಗಳೂರು(reporterkarnataka.com): ಸುರಂಗ ರಸ್ತೆ ಯೋಜನೆಯನ್ನು ವಿರೋಧಿಸಿ ಲಾಲ್‌ಬಾಗ್‌ನಲ್ಲಿ ನವೆಂಬರ್‌ 2 ರ ಬೆಳಗ್ಗೆ 8 ಗಂಟೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸುರಂಗ ರಸ್ತೆ ಯೋಜನೆಯ ಹೆಸರು ಕೇಳಿದರೆ ಜನರು ಭೀತಿಗೊಳ್ಳುತ್ತಿದ್ದಾರೆ. ಎಲ್ಲಿ ಯಾರ ಮನೆ ಹೋಗಲಿದೆ ಎಂದು ತಿಳಿಯುತ್ತಿಲ್ಲ. ಲಾಲ್‌ಬಾಗ್‌ನಲ್ಲಿ 6 ಎಕರೆ ಜಮೀನು ಕಬಳಿಕೆ ಮಾಡಿ ಯೋಜನೆ ಮಾಡಲಾಗುತ್ತದೆ. ಇದಕ್ಕೆ ಯಾವ ಇಲಾಖೆಯೂ ಅನುಮತಿ ನೀಡಿಲ್ಲ. ಬಿಹಾರ ಚುನಾವಣೆ ಬಂದಿರುವುದರಿಂದ ಹಣ ಮಾಡಲು ಈ ಯೋಜನೆ ಜಾರಿ ಮಾಡುತ್ತಿರಬಹುದು. ಲಾಲ್‌ಬಾಗ್‌ ಉಳಿಸಿ, ಬೆಂಗಳೂರು ರಕ್ಷಿಸಿ ಎಂಬ ಘೋಷಣೆಯಡಿ ಇದೇ ನವೆಂಬರ್‌ 2 ರ ಭಾನುವಾರ ಬೆಳಗ್ಗೆ 8 ಗಂಟೆಗೆ ಲಾಲ್‌ಬಾಗ್‌ನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದರು.
ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಸಂಬಂಧಿಸಿದಂತೆ ಎಲ್ಲ ಶಾಸಕರು ಸಭೆ ಸೇರಿ ಚರ್ಚೆ ಮಾಡುತ್ತೇವೆ. ಈ ಬಗ್ಗೆ ಹೋರಾಟ ಮಾಡುವ ಬಗ್ಗೆ ಚರ್ಚೆ ಮಾಡುತ್ತೇವೆ. ಬಿಜೆಪಿ ಅವಧಿಯಲ್ಲಿ ರಸ್ತೆ ದುರಸ್ತಿಗೆ 8,000 ಕೋಟಿ ರೂ. ನೀಡಲಾಗಿತ್ತು. ಈಗ ಕಾಂಗ್ರೆಸ್‌ ಸರ್ಕಾರ ಡಾಂಬರೀಕರಣ ಬಿಟ್ಟು ಹೊಸದಾಗಿ ರಸ್ತೆ ನಿರ್ಮಿಸಬೇಕಿದೆ. ಸಿಎಂ ಸಿದ್ದರಾಮಯ್ಯ ಒಮ್ಮೊಮ್ಮೆ ಒಂದೊಂದು ರೀತಿಯ ಅನುದಾನದ ಬಗ್ಗೆ ಹೇಳುತ್ತಿದ್ದಾರೆ. ಕಾಟಾಚಾರಕ್ಕೆ ಬ್ರ್ಯಾಂಡ್‌ ಬೆಂಗಳೂರಿನ ಘೋಷಣೆ ಮಾಡಲಾಗುತ್ತಿದೆ. ಡಿ.ಕೆ.ಶಿವಕುಮಾರ್‌ ಯಾವಾಗಲೂ ಬ್ರ್ಯಾಂಡ್‌ ಬಗ್ಗೆ ಹೇಳುತ್ತಾರೆ. ಅಧಿಕಾರಿಗಳಂತೂ ಇವರ ಮಾತನ್ನು ಕೇಳುತ್ತಿಲ್ಲ ಎಂದರು.
ಸಂಸದ ತೇಜಸ್ವಿ ಸೂರ್ಯ ಅವರನ್ನು ಅವಹೇಳನ ಮಾಡುವುದು ತಪ್ಪು. ಇದು ಒಂದು ಲೋಕಸಭಾ ಕ್ಷೇತ್ರಕ್ಕೆ ಮಾಡುವ ಅಪಮಾನ. ಸಿಎಂ ಹಾಗೂ ಡಿಸಿಎಂ ಗೌರವ ಕೊಟ್ಟು ಮಾತಾಡುವುದನ್ನು ಕಲಿಯಲಿ ಎಂದು ಅವರು ನುಡಿದರು.

*ಧರ್ಮಸ್ಥಳ ಕುರಿತು ಅಪಪ್ರಚಾರ:*
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿರುವುದು ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮವಾಗಿದೆ. ಅಪಪ್ರಚಾರ ಮಾಡಿರುವವರಿಗೆ ಶಿಕ್ಷೆಯಾಗಬೇಕು. ಅದಕ್ಕಾಗಿ ಸರ್ಕಾರ ಸೂಕ್ತ ಕ್ರಮ ವಹಿಸಬೇಕಿದೆ. ಡಿ.ಕೆ.ಶಿವಕುಮಾರ್‌ ಈ ಬಗ್ಗೆ ಮಾಧ್ಯಮಗಳ ಮುಂದೆ ಪ್ರಶ್ನೆ ಕೇಳುವ ಬದಲು, ಸಚಿವ ಸಂಪುಟದಲ್ಲೇ ಪ್ರಶ್ನೆ ಕೇಳಬೇಕಿತ್ತು. ಎಸ್‌ಐಟಿ ರಚಿಸುವುದನ್ನು ಅವರು ಮೊದಲೇ ತಡೆಯಬಹುದಿತ್ತು ಎಂದರು.
ನಿವೇಶನಗಳಿಗೆ, ಖಾತಾಗೆ ಸಂಬಂಧಿಸಿದಂತೆ ವಸೂಲಿ ಮಾಡಲಾಗುತ್ತಿದೆ. ಒಸಿ, ಸಿಸಿಗೆ ಕಮಿಶನ್‌ ನಿಗದಿಯಾಗಿದೆ. ಯಾರೂ ಮನೆ ಕಟ್ಟಲು ಸಾಧ್ಯವಿಲ್ಲ. ಅಭಿವೃದ್ಧಿ ಶುಲ್ಕವನ್ನು 4-5 ಲಕ್ಷ ರೂ. ಗೆ ಏರಿಸಲಾಗಿದೆ. ಕರ್ನಾಟಕವೆಂದರೆ ಕಲೆಕ್ಷನ್‌ ಸೆಂಟರ್‌ ಆಗಿದೆ ಎಂದು ಹೇಳಿದರು.
ಕಾಂಗ್ರೆಸ್‌ ಸರ್ಕಾರ ವಯನಾಡಿನಲ್ಲಿದೆ. ಹಿಂದೆ ಆನೆಯಿಂದ ಸತ್ತಿದ್ದಕ್ಕೆ ಪರಿಹಾರ ಕೊಟ್ಟಿದ್ದರು. ಈಗ ವಯನಾಡಿನಲ್ಲಿ ಪ್ರವಾಸ ಮಾಡಿ ಎಂದು ಜಾಹೀರಾತು ನೀಡುತ್ತಿದ್ದಾರೆ. ಅಲ್ಲಿ ಕರ್ನಾಟಕದ ಯಾವುದೇ ಸ್ಥಳ ಇಲ್ಲ. ಜೋಗ, ಹಂಪಿ, ಕೊಡಗು, ಗೋಕರ್ಣದಲ್ಲಿರುವಂತಹ ಸ್ಥಳ ವಯನಾಡಿನಲ್ಲಿ ಇಲ್ಲ. ರಾಹುಲ್‌ ಗಾಂಧಿ, ಪ್ರಿಯಾಂಕ ಗಾಂಧಿ ಅವರ ಫ್ಲೆಕ್ಸ್‌ ನೋಡಲು ಜನರು ಅಲ್ಲಿಗೆ ಪ್ರವಾಸ ಹೋಗಬೇಕಿದೆ. ಮೈಸೂರು ಅರಮನೆ ಬಗ್ಗೆ ಪ್ರಚಾರ ಮಾಡುವುದನ್ನು ಬಿಟ್ಟು ವಯನಾಡಿನ ರಾಹುಲ್‌ ಗಾಂಧಿ ಅರಮನೆ ಬಗ್ಗೆ ಪ್ರಚಾರ ಮಾಡುತ್ತಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು