10:47 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮಿನಿ ಕರ್ನಾಟಕ ಕ್ರೀಡಾಕೂಟ ಉದ್ಘಾಟನೆ | ನಿಮ್ಮ ಉತ್ಸಾಹಕ್ಕೆ ತಕ್ಕಷ್ಟು ನಮ್ಮ ಪ್ರೋತ್ಸಾಹ: ಸಿಎಂ ಘೋಷಣೆ

03/11/2025, 08:49

ಬೆಂಗಳೂರು(reporterkarnataka.com): ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಸಹಕಾರ ನೀಡುತ್ತಿದೆ. ನಿಮ್ಮ ಉತ್ಸಾಹಕ್ಕೆ ತಕ್ಕಂತೆ ನಮ್ಮ ಪ್ರೋತ್ಸಾಹ ಸದಾ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ಮತ್ತು ರಾಜ್ಯ ಒಲಂಪಿಕ್ ಅಸೋಸಿಯೇಷನ್ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 14 ವರ್ಷದೊಳಗಿನ ಮಕ್ಕಳ ಮಿನಿ ಕರ್ನಾಟಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಪ್ರೋತ್ಸಾಹ ಕೊಟ್ಟುಕೊಂಡೇ ಬರುತ್ತಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಲು ಇಂಥಾ ಕ್ರೀಡಾಕೂಟ ಸಹಕಾರಿ ಆಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಉತ್ಸಾಹದಿಂದ ಭಾಗವಹಿಸಿ. ಕ್ರೀಡೆಯಲ್ಲಿ ಗೆಲುವು ಸೋಲಿಗಿಂತ ಭಾಗವಹಿಸುವಿಕೆ ಅತೀ ಮುಖ್ಯ ಎಂದರು.
ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ. ಪೊಲೀಸ್ ಇಲಾಖೆಯಲ್ಲಿ ಶೇ3 ರಷ್ಟು ಹುದ್ದೆಗಳು ಮತ್ತು ಇತರೆ ಇಲಾಖೆಗಳಲ್ಲಿ ಶೇ2 ರಷ್ಟು ಹುದ್ದೆಗಳನ್ನು ಒದಗಿಸಲಾಗುತ್ತದೆ ಎಂದು ಅವರು ನುಡಿದರು.
ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ವಿಜೇತರಾಗಿ ಪದಕ ತಂದ ಕ್ರೀಡಾ ಪಟುಗಳಿಗೆ ಉತ್ತಮ ನಗದು ಬಹುಮಾನವನ್ನೂ ನೀಡುತ್ತಿದೆ ಎಂದು ವಿವರಿಸಿದರು.
ಸಚಿವರಾದ ರಾಮಲಿಂಗಾರೆಡ್ಡಿ, ರಾಜ್ಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಕೆ.ಗೋವಿಂದರಾಜು, ಶಾಸಕರಾದ ರಿಜ್ವಾನ್ ಅರ್ಷದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು