8:36 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ

03/11/2025, 16:00

ಮೈಸೂರು(reporterkarnataka.com): ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು.
ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ ಆಗಬೇಕು. ಅರಸು ಅವರು ಅತ್ಯಂತ ಕೆಳಮಟ್ಟದಲ್ಲಿರುವ ಜನ ಸಮುದಾಯಗಳ ಪ್ರತಿನಿಧಿಗಳನ್ನು ವಿಧಾನಸೌಧದ ಮೆಟ್ಟಿಲು ಹತ್ತಿಸುವಂತೆ ಮಾಡಿದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅರಸು ಅವರು ತಳ ಸಮುದಾಯಗಳಿಗೆ ಅವಕಾಶಗಳನ್ನು ಸೃಷ್ಟಿಸಿದರು. ಆ ಅವಕಾಶಗಳಿಂದ ಬಹಳ ಮಂದಿ ಸಮಾಜದ ಮುಖ್ಯವಾಹಿನಿಗೆ ಬಂದರು. ಸುದೀರ್ಘ ಅವಧಿಯ ಕಾಲ ಮುಖ್ಯಮಂತ್ರಿಗಳಾಗಿ ಸಮಾನ ಅವಕಾಶಗಳನ್ನು ಸೃಷ್ಟಿಸಲು ನಿರಂತರವಾಗಿ ಶ್ರಮಿಸಿದ್ದರು ಎಂದು ವಿವರಿಸಿದರು.
ಬಹುಸಂಖ್ಯಾತ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿದ್ದರಿಂದ ಅಸಮಾನತೆ ಸೃಷ್ಟಿಯಾಗಿದೆ. ನಮ್ಮ ಸರ್ಕಾರ ಅಸಮಾನತೆ ನಿವಾರಿಸಿ ಸಮಾನ ಅವಕಾಶಗಳನ್ನು ಸೃಷ್ಟಿಸಲು ನಿರಂತರವಾಗಿ ಶ್ರಮಿಸುತ್ತಿದೆ, ಜನಪರ, ಸಾಮಾಜಿಕ ನ್ಯಾಯದ ಪರ ಯೋಜನೆಗಳನ್ನು ರೂಪಿಸಿ ಜಾರಿಗೆ ತರುತ್ತಿದೆ ಎಂದರು.


ಶಿಕ್ಷಣ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಎಲ್ಲರಲ್ಲೂ ಪ್ರತಿಭೆ ಇದೆ. ಅಂಬೇಡ್ಕರ್ ಮತ್ತು ವಾಲ್ಮೀಕಿ, ವ್ಯಾಸರು ಇದಕ್ಕೆ ಉದಾಹರಣೆ ಎಂದರು.
ನಮ್ಮ ರಾಜ್ಯಕ್ಕೆ “ಕರ್ನಾಟಕ” ಎಂದು ನಾಮಕರಣ ಆಗಿದ್ದು ಅರಸು ಅವರ ಕಾಲದಲ್ಲಿ. ಇದರ ಸುವರ್ಣ ಸಂಭ್ರಮ ಮಾಡಿದ್ದು ನಮ್ಮ ಸರ್ಕಾರ ಎಂದು ಸ್ಮರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು