8:08 PM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್ ಪ್ರತಿಕ್ರಿಯೆ

04/11/2025, 17:25

ಬೆಂಗಳೂರು(reporterkarnataka.com): ನಾವು ಕೂಡ ರೈತರು, ಕಾರ್ಖಾನೆ ಇದ್ದ ಕಾರಣಕ್ಕೆ ರೈತರ ಕಷ್ಟ ಗೊತ್ತಿಲ್ಲ ಅಂತಲ್ಲ. ರೈತರಿಗೂ ಅನ್ಯಾಯ ಆಗಬಾರದು, ಕಾರ್ಖಾನೆ ಮಾಲೀಕರಿಗೂ ಅನ್ಯಾಯ ಆಗಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ.
ಕಬ್ಬು ಬೆಲೆ ಹೆಚ್ಚಳಕ್ಕೆ ರೈತರ ಪ್ರತಿಭಟನೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು,‌ ಈಗಾಗಲೇ ಎರಡು ಬಾರಿ ಸಭೆ ನಡೆಸಲಾಗಿದೆ. ನಾನು ಬ್ಯೂಸಿ ಇದ್ದ ಕಾರಣ ಮೀಟಿಂಗ್ ನಲ್ಲಿ ಇರಲಿಲ್ಲ. ನನ್ನ ತಮ್ಮ ಹಾಗೂ ಮಗ ರೈತರ ಸಂಪರ್ಕದಲ್ಲಿದ್ದಾರೆ ಎಂದರು.
ಕಾರ್ಖಾನೆ ಮಾಲೀಕರು, ರೈತರು ಸೇರಿ ಸಭೆ ಮಾಡುತ್ತೇವೆ. ದರದ ಬಗ್ಗೆ ಮಾತನಾಡಲು ಹೋದರೆ ಬೇರೆ ರೀತಿ ಆಗುತ್ತೆ. ರೈತರಿಗೆ ದಕ್ಕೆಯಾಗದ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದು ‌ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ರೈತರ ಪ್ರತಿಭಟನೆಯಲ್ಲಿ ‌ಬಿಜೆಪಿ ನಾಯಕರು ಭಾಗಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ರೈತರ ಹೋರಾಟದಲ್ಲಿ ಎಲ್ಲರೂ ಭಾಗಿಯಾಗಲಿ, ರಾಜಕೀಯ ಬಿಟ್ಟು ಪ್ರತಿಭಟನೆಗೆ ಹೋಗಲಿ. ರೈತರ ಬಗೆಗಿನ ಬಿಜೆಪಿ ಹೋರಾಟ ನಮಗೂ ಗೊತ್ತಿದೆ, ನಿಮಗೂ ಗೊತ್ತಿದೆ ಎಂದರು.
ಕೇಂದ್ರ ಸರ್ಕಾರ ರೈತರ ಪ್ರತಿಭಟನೆಯನ್ನು ಹೇಗೆಲ್ಲಾ ಹತ್ತಿಕ್ಕಿತು. ಈ ಹೋರಾಟದಲ್ಲಿ ಎಷ್ಟು ಜನ ರೈತರು ತೀರಿಕೊಂಡರು ಎನ್ನುವುದು ಗೊತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ನಿಜವಾಗಿಯೂ ರೈತರ ಬಗ್ಗೆ ಕಾಳಜಿ ಇರಲಿ.‌ ಸದ್ಯಕ್ಕೆ ನಾನು ಈ ಬಗ್ಗೆ ಏನೂ ಮಾತನಾಡಲ್ಲ ಎಂದು‌ ಸಚಿವರು ಪ್ರತಿಕ್ರಿಯಿಸಿದರು.

* *ರಾಹುಲ್ ಗಾಂಧಿ ಭಾಗಿ ನಿರೀಕ್ಷೆ:*
ನವೆಂಬರ್ 19ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಆಹ್ವಾನ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ರಾಹುಲ್ ಗಾಂಧಿ ಅವರ ಬಳಿ‌ ನವೆಂಬರ್ 19 ಮತ್ತು 20ಕ್ಕೆ ಸಮಯ ಕೊಡಿ ಅಂತ ಕೇಳಿದ್ದೇವೆ. ಬೆಂಗಳೂರಿನಲ್ಲಿ ಟೆಕ್‌ ಶೃಂಗ ಸಭೆ ನಡೆಯಲಿದ್ದು, ಸಮಯ ಹೊಂದಿಸಿಕೊಂಡು ಹೇಳುವುದಾಗಿ ತಿಳಿಸಿದ್ದಾರೆ ಎಂದು ಪ್ರತಿಕ್ರಿಯಿಸಿದರು.
ಅಂಗನವಾಡಿಗಳನ್ನ ಪ್ರಥಮ ಬಾರಿಗೆ ಮೈಸೂರಲ್ಲಿ ಆರಂಭ ಮಾಡಿದ್ದು ಇಂದಿರಾ ಗಾಂಧಿ, ಎಲ್ಲಾ ಬಡ ಮಕ್ಕಳಿಗೆ ಪೌಷ್ಟಿಕಾಂಶ ಆಹಾರ ಕೊಡಬೇಕು ಅಂತ ಆರಂಭಿಸಲಾಯಿತು. ಇದೀಗ ಐವತ್ತು ವರ್ಷ ಪೂರೈಸಿದ್ದು, ಇಂತಹ ಒಂದು ಸುವರ್ಣ ಸಂಭ್ರಮವನ್ನ ಕಂಠೀರವ ಕ್ರೀಡಾಂಗಣದಲ್ಲಿ ಮಾಡಲಾಗುತ್ತಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು