5:27 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

Mangaluru | ಕುದ್ರೋಳಿ ದೇಗುಲಕ್ಕೆ ವ್ಯಾಟಿಕನ್ ಉಪ ರಾಯಭಾರಿ ಆ್ಯಂಡ್ರಿಯಾ ಫಾನ್ಸಿಯಾ ಭೇಟಿ

04/11/2025, 18:49

ಮಂಗಳೂರು(reporterkarnataka.com): ಭಾರತ ಹಾಗೂ ನೇಪಾಳದ ವ್ಯಾಟಿಕನ್ ನ ಉಪ ರಾಯಭಾರಿ ವಂ| ಆ್ಯಂಡ್ರಿಯಾ ಫಾನ್ಸಿಯಾ ಅವರು ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಮಂಗಳವಾರ ಸೌಹಾರ್ದ ಭೇಟಿ ನೀಡಿದರು.


ಈ ವೇಳೆ ಕ್ಷೇತ್ರದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ ಪೂಜೆಯಲ್ಲಿ ಪಾಲ್ಗೊಂಡು ಇಲ್ಲಿನ ಸಂಪ್ರದಾಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಧರ್ಮಗುರುಗಳಿಗೆ ಕ್ಷೇತ್ರದ ವತಿಯಿಂದ ಗೌರವಿಸಲಾಯಿತು. ಧರ್ಮಗುರುಗಳು ಕ್ಷೇತ್ರದ ಬಗ್ಗೆ ಮಾಹಿತಿ ಪಡೆದರು. ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಹಾಗೂ ಅವರ ತತ್ತ್ವಗಳ ಕುರಿತ ಕೆಲವು ಪುಸ್ತಕಗಳನ್ನು ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಪೂಜಾರಿ ಅವರಿಂದ ಪಡೆದುಕೊಂಡರು.
ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಧಾನ ಧರ್ಮಗುರು ವಂ| ಜೋಸೆಫ್ ವಲಯ ಪರಂಬಿಲ್, ಬಿಜು ಜೋಸೆಫ್ ಮಂಗಳೂರು, ಮನೋಜ್, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಜಯರಾಜ್ ಸೋಮಸುಂದರ್, ಮಾಜಿ ಕಾರ್ಪೊರೇಟರ್ ಪ್ರವೀಣ್ ಚಂದ್ರ ಆಳ್ವ, ದಿನೇಶ್ ಅಂಚನ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು