11:53 PM Sunday22 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ಕಬ್ಬಿನ ದರ ನಿಗದಿಪಡಿಸಲು ತಕ್ಷಣ ಮುಖ್ಯಮಂತ್ರಿ ಮಧ್ಯ ಪ್ರವೇಶಿಸಲಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ

05/11/2025, 14:11

*ಪ್ರತಿ ಟನ್ ಕಬ್ಬಿಗೆ ಕಾರ್ಖಾನೆಯವರು 3300 ರೂ, ರಾಜ್ಯ ಸರ್ಕಾರ 200 ರೂ. ದರ ನೀಡಲಿ: ಬಸವರಾಜ ಬೊಮ್ಮಾಯಿ ಸಲಹೆ*

ಬೆಂಗಳೂರು(reporterkarnataka.com): ರಾಜ್ಯದ ಕಬ್ಬು ಬೆಳೆಗಾರರ ಬೇಡಿಕೆಯಂತೆ ಪ್ರತಿ ಟನ್ ಕಬ್ಬಿಗೆ 3500 ರೂ. ದರ ನೀಡಲು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಮಧ್ಗ ಪ್ರವೇಶ ಮಾಡಬೇಕು. ಸಕ್ಕರೆ ಕಾರ್ಖಾನೆ ಮಾಲೀಕರು ಪ್ರತಿ ಟನ್ ಕಬ್ಬಿಗೆ 3300 ರೂ. ಹಾಗೂ ರಾಜ್ಯ ಸರ್ಕಾರ 200. ರೂ. ನೀಡಿ, ರೈತರ ಬೇಡಿಕೆ ಈಡೇರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ ಕಬ್ಬು ಬೆಳೆಗಾರರು ನ್ಯಾಯ ಸಮ್ಮತ ಬೆಲೆ ನಿಗದಿ ಆಗಬೇಕೆಂದು ಏಳನೇ ದಿನ ಹೋರಾಟ ಮಾಡುತ್ತಿದ್ದಾರೆ. ವ್ಯಾಪಕ ಹೋರಾಟ ಆಗುತ್ತಿದೆ. ನಾನು ಈಗಾಗಲೇ ಪ್ರತಿ ಟನ್ ಕಬ್ಬಿಗೆ 3500 ರೂ. ದರ ನಿಗದಿ ಮಾಡುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ್ದೇನೆ. ಆದರೆ, ಸಿಎಂ ರೈತರ ಬಗ್ಗೆ ಅಸಡ್ಡೆ ಭಾವನೆ ವ್ಯಕ್ತಪಡಿಸಿ ತಮ್ಮ ರಾಜಕಾರಣವನ್ನು ಸಿಎಂ ಸ್ಥಾನ ಉಳಿಸಿಕೊಳ್ಳಲು ಸಮಯ ಸಿಗುತ್ತಿಲ್ಲ ಹೀಗಾಗಿ ರೈತರ ಸಮಸ್ಯೆ ಪರಿಹರಿಸಲು ಅವರಿಗೆ ಆಗುತ್ತಿಲ್ಲ ಎಂದು ಆರೋಪಿಸಿದ್ದಾರೆ.
ರೈತರ ಕಬ್ಬು ಬೆಳೆಗಾರರ ಸಮಸ್ಯೆ ಪ್ರತಿ ವರ್ಷ ಆಗುತ್ತಿರುವುದು ಗಮನಾರ್ಹ. ಕೇಂದ್ರ ಸರ್ಕಾರ ಎಫ್ ಆರ್ ಪಿ ನಿಗದಿ ಮಾಡಿದ ನಂತರ ಸಕ್ಕರೆ ಕಾರ್ಖಾನೆಗಳು ಎಥೆನಾಲ್, ವಿದ್ಯುತ್ ಸೆರಿದಂತೆ ಇತರೆ ಉಪ ಉತ್ಪನ್ನ ತಯಾರಿಸುತ್ತಾರೆ. ಹೀಗಾಗಿ ರೈತರು ಕೇಳುವ ದರವನ್ನು ನೀಡಲು ಸಾಧ್ಯವಿದೆ. ರಾಜ್ಯ ಸರ್ಕಾರ ಕಬ್ಬಿನ ದರವನ್ನು ನಿಗದಿ ಮಾಡಬೇಕು. ರಾಜ್ಯ ಸರ್ಕಾರಕ್ಕೆ ಕಾನೂ‌ನು ಪ್ರಕಾರ ದರ ನಿಗದಿ ಮಾಡಲು ಅಧಿಕಾರ ಇದೆ. ರೈತರ ಬೇಡಿಕೆ ತಕ್ಕಂತೆ ದರ ನಿಗದಿ ಮಾಡಿ ಸರ್ಕಾರ ಆದೇಶ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಸರ್ಕಾರ ಎರಡು ರೀತಿಯಲ್ಲಿ ಪರಿಹಾರ ಕೊಡಬಹುದು ಸುಮಾರು 27 ಸಾವಿರ ಕೊಟಿ ರೂ. ಸರ್ಕಾರಕ್ಕೆ ಸಕ್ಕರೆ ಹಾಗೂ ಇತರ ಉಪ ಉತ್ಪನ್ನಗಳ ಮೂಲಕ ಆದಾಯ ಬರುತ್ತದೆ. ಇದರಲ್ಲಿ ಸರ್ಕಾರ ಪ್ರತಿ ಟನ್ ಗೆ 200 ರೂಪಾಯಿ ಕೊಡಬೇಕು. ಸಕ್ಕರೆ ಕಾರ್ಖಾನೆ ಮಾಲಿಕರು ಪ್ರತಿ ಟನ್ ಕಬ್ಬಿಗೆ 3300 ರೂ. ಕೊಡಲು ಮುಂದೆ ಬರಬೇಕು. ಇದರಿಂದ ರೈತರಿಗೆ ಪ್ರತಿ ಟನ್ ಕಬ್ಬಿಗೆ 3500 ರೂ. ದರ ನೀಡಲು ಸಾಧ್ಯವಾಗುತ್ತದೆ.
ಎರಡನೇಯದಾಗಿ ಸಕ್ಕರೆಯ ಜೊತೆಗೆ ವಿದ್ಯುತ್ ಉತ್ಪಾದನೆಯಾಗುತ್ತದೆ. ಮಹಾರಾಷ್ಟ್ರದಲ್ಲಿ ಸಕ್ಕರೆ ಕಾರ್ಖಾನೆ ಮಾಲಿಕರೊಂದಿಗೆ ಪಿಪಿಎ ಅಗ್ರಿಮೆಂಟ್ ಆಗಿದೆ. ಅಲ್ಲಿ ಕಾರ್ಖಾನೆ ಮಾಲೀಕರಿಗೆ ಪ್ರತಿ ಯುನಿಟ್ ಗೆ 5.5 ರೂ. ಸಿಗುತ್ತದೆ. ಅದೇ ರೀತಿ ರಾಜ್ಯದಲ್ಲಿ ಒಪ್ಪಂದ ಮಾಡಿಕೊಂಡರೆ ಈಗ ನೀಡುತ್ತಿರುವ ಪ್ರತಿ ಯುನಿಟ್ ಗೆ 3 ರೂ ಬದಲು 5.5 ರೂ. ದೊರೆಯುತ್ತದೆ. ಇದರಿಂದ ಕಬ್ಬಿಗೆ ಹೆಚ್ಚಿಗೆ ದರ ಕೊಡಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನಗಿರುವ ಅಧಿಕಾರ ಚಲಾವಣೆ ಮಾಡಿ, ಕಬ್ಬಿನ ಕಾರ್ಖಾನೆ ಮಾಲೀಕರ ಜೊತೆ ಸಭೆ ನಡೆಸಿ ದರ ಪಟ್ಟಿಯನ್ನು ರೈತರ ನ್ಯಾಯ ಸಮ್ಮತ ಬೇಡಿಕೆಯಂತೆ 3500 ರಿಂದ ದರ ಪಟ್ಟಿ ನಿಗದಿ ಮಾಡಬೇಕು. ಇಲ್ಲದಿದ್ಧರೆ ರೈತರ ಕಟ್ಟೆ ಒಡೆದರೆ ರಾಜ್ಯದ ರೈತರ ಮೇಲೆ ದೊಡ್ಡ ಪರಿಣಾಮ ಬಿರುತ್ತದೆ. ಅದು ಅತ್ಯಂತ ದುರದೃಷ್ಟ ಕರ ವಿಳಂಬ ಮಾಡದೇ ಸರ್ಕಾರ ಪರಿಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

*ರೈತರ ಪರ ಹೋರಾಟ:*
ಬಿಜೆಪಿ ಯಾವಾಗಲೂ ರೈತರ ಪರ ಹೋರಾಟದಲ್ಲಿ ನಿಲ್ಲುತ್ತದೆ. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷರು ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವುದು ಸಾಕ್ಷಿ. ಇದರ ಜೊತೆಗೆ ಇನ್ನಿತರ ವಿಚಾರಗಳನ್ನು ಚರ್ಚೆ ಮಾಡಬೇಕು. ಸಕ್ಕರೆ ನುರಿಸಲು ಕೂಡಲೇ ಆರಂಭಿಸಬೇಕು. ಈ ವಿಚಾರದಲ್ಲಿ ಸಿಎಂ ಕೂಡಲೇ ಮಧ್ಗ ಪ್ರವೇಶ ಮಾಡಬೇಕು. ಸರ್ಕಾರದ ಮಂತ್ರಿಗಳು ಒಂದಿಲ್ಲೊಂದು ರೀತಿಯಲ್ಲಿ ಸಕ್ಕರೆ ವ್ಯವಹಾರದ ಹಿತಾಸಕ್ತಿಯಲ್ಲಿ ಭಾಗಿಯಾಗಿರುವುದರಿಂದ ಸ್ವತಃ ಮುಖ್ಯಮಂತ್ರಿ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು