ಇತ್ತೀಚಿನ ಸುದ್ದಿ
Mangaluru | ಅಕ್ರಮ ಗೋಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಸ್ಥಳ ಜಫ್ತಿ
05/11/2025, 21:51
ಮಂಗಳೂರು(reporterkarnataka.com): ಅಕ್ರಮ ಗೋಹತ್ಯೆ ಪ್ರಕರಣದಲ್ಲಿ ತಕ್ಷಿರು ನಡೆಸಲು ಉದ್ದೇಶಿಸಿದ್ದ ಸ್ಥಳಗಳ ಜಪ್ತಿ ಮಾಡಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 72/2025, ಕಲಂ: 5, 12 ಕರ್ನಾಟಕ ಗೋ ಹತ್ಯೆ ನಿಷೇಧಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ -2020 ಮತ್ತು ಕಲಂ: 11 (1) (ಡಿ) ಪ್ರಾಣಿ ಹಿಂಸೆ ತಡೆ ಕಾಯಿದೆ ಯಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ತನಿಖೆ ನಡೆಸಿ, ಪ್ರಕರಣದ ಆರೋಪಿ ಇಬ್ರಾಹಿಂ ಖಲೀಲ ಅಲಿಯಾಸ್ ತೌಸಿಫ್ ಎಂಬಾತನು ಅಕ್ರಮವಾಗಿ ಜಾನುವಾರುಗಳನ್ನು ಮಾಂಸ ಮಾಡಲು ಉದ್ದೇಶಿಸಿದ ಸಜೀಪನಡು ಗ್ರಾಮದ ತಂಚಿಬೆಟ್ಟು ಎಂಬಲ್ಲಿನ ಮನೆಯನ್ನು ಹಾಗೂ ಪ್ರಕರಣದ ಇನ್ನೊಬ್ಬ ಆರೋಪಿ ಮಹಮ್ಮದ್ ಸಿನಾನ್ ಎಂಬಾತನು ಸಜಿಪಪಡು ಗ್ರಾಮದ ಕೋಟೆಕಣಿ ಎಂಬಲ್ಲಿ ಮಾಂಸ ಇಡಲು ಉದ್ದೇಶಿಸಿದ ಕೋಣೆ ಜಪ್ತಿ ಮಾಡಲಾಗಿರುತ್ತದೆ.












