7:43 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ ಸಾವು

05/11/2025, 21:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿದ್ಯುತ್ ಸ್ಪರ್ಶದಿಂದ ಮೂರು ಹಸುಗಳು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಕೆಳಮಲ್ಲಂದೂರು ಗ್ರಾಮದಲ್ಲಿ ಭಾನುವಾರ ನಡೆದಿದೆ.
ಕೆಳಮಲ್ಲಂದೂರು ಗ್ರಾಮದ ಕೃಷಿಕ ಸಿ.ಎಸ್. ಗೋಪಾಲಗೌಡ ಎಂಬುವವರಿಗೆ ಸೇರಿದ ಮೂರು ಜರ್ಸಿ ಹಸಗಳು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿವೆ.
ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದರಿಂದ ಆಕಸ್ಮಿಕ ವಿದ್ಯುತ್ ತಗುಲಿ ಹಸುಗಳು ಅಸುನೀಗಿವೆ ಎಂದು ಹೇಳಲಾಗುತ್ತಿದೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಕುಟುಂಬಕ್ಕೆ ಆರ್ಥಿಕ ಆಧಾರಸ್ತಂಭವಾಗಿದ್ದ ಮೂರು ಹಸುಗಳು ಏಕಕಾಲದಲ್ಲಿ ಸಾವನ್ನಪ್ಪಿದ್ದು, ಸುಮಾರು 2 ಲಕ್ಷಕ್ಕೂ ಅಧಿಕ ನಷ್ಟವುಂಟಾಗಿದೆ. ಪ್ರೀತಿಯಿಂದ ಸಾಕಿ ಸಲಹಿದ್ದ ಹಸುಗಳು ಸಾವನ್ನಪ್ಪಿರುವುದರಿಂದ ರೈತ ಗೋಪಾಲಗೌಡ ಕುಟುಂಬದವರು ಕಂಗಾಲಾಗಿದ್ದಾರೆ.
ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈತರಿಗೆ ಆಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು