10:10 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ

07/11/2025, 10:10

ಬೆಂಗಳೂರು(reporterkarnataka.com): 2011-12ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಂಯುಕ್ತ ಸಂಘರ್ಷ ಸಮಿತಿ ವತಿಯಿಂದ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘಟನೆಗಳ ವತಿಯಿಂದ 2011-12 ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಸಚಿವರು, ಈ ಸಂಬಂಧ ಶೀಘ್ರವೇ ನಿಯೋಗದೊಂದಿಗೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲಾಗುವುದು ಎಂದರು.
ಇಲಾಖೆಯಲ್ಲಿ ಕೆಲ ಅಧಿಕಾರಿಗಳ ಅಚಾತುರ್ಯದಿಂದ 2011ನೇ ಸಾಲಿನ ಬದಲಾಗಿ 2023ನೇ ಸಾಲಿನಿಂದ ಗ್ರ್ಯಾಚುಟಿ ಜಾರಿಗೆ ಬಂದಿದೆ.‌ ಈ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲಾಗುವುದು. ಈಗಾಗಲೇ 3-4 ಬಾರಿ ಹಣಕಾಸು ಇಲಾಖೆಯವರ ಜೊತೆ ಮಾತುಕತೆ ನಡೆಸಲಾಗಿದೆ. ಮುಖ್ಯಮಂತ್ರಿ ಅವರ ಜೊತೆ ಮಾತುಕತೆ ನಡೆಸಿ ಈ ಸಮಸ್ಯೆಯನ್ನು ಬಗೆ ಹರಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು.

 

ಕರ್ನಾಟಕದಲ್ಲಿ ಅಂಗನವಾಡಿ ಆರಂಭವಾಗಿ 50 ವರ್ಷಗಳಾಗಿದ್ದು, ನವೆಂಬರ್ 19 ರಂದು ಬೆಂಗಳೂರಿನಲ್ಲಿ ಅದ್ದೂರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಎಲ್ಲರೂ ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಮಹೇಶ್ ಬಾಬು, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಮಹಾ ಮಂಡಲದ ಅಧ್ಯಕ್ಷರಾದ ಜಿ.ಆರ್. ಶಿವಶಂಕರ್, ಪ್ರಧಾನ ಕಾರ್ಯದರ್ಶಿ ಬಿ.ನಾಗರತ್ನಮ್ಮ, ಎಐಯುಟಿಯುಸಿ ಅಧ್ಯಕ್ಷರಾದ ಬಿ.ಅಮ್ಜದ್, ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ, ಎಐಟಿಯುಸಿ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ, ಪ್ರಧಾನ ಕಾರ್ಯದರ್ಶಿ ಎಂ.ಉಮಾದೇವಿ ಸೇರಿದಂತೆ ಸಂಘಟನೆಯ ನೂರಾರು ‌ಮಂದಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು