8:54 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

Mangaluru | ತುಳು ಭವನದಲ್ಲಿ ನಾಳೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತರೊಂದಿಗೆ ಮಾತುಕತೆ

07/11/2025, 10:54

ಮಂಗಳೂರು(reporterkarnataka.com): ತುಳುನಾಡಿನ ಜಾನಪದ ಕ್ಷೇತ್ರದ ಸಾಧನೆಗಾಗಿ ಈ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಉಮೇಶ್ ಪಂಬದ ಗಂಧಕಾಡು ಹಾಗೂ ಕಲಾವಿದರಾದ ಸಿಂಧೂ ಗುಜರನ್ ಅವರೊಂದಿಗೆ ಮಾತುಕತೆ ಕಾರ್ಯಕ್ರಮ ನ.8 ರಂದು ಮಧ್ಯಾಹ್ನ 2:30 ಗಂಟೆಗೆ ಮಂಗಳೂರಿನ ತುಳು ಭವನದಲ್ಲಿ ಆಯೋಜಿಸಲಾಗಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಹಯೋಗದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಶನಿವಾರ ‌ಅಪರಾಹ್ನ 2.30 ಕ್ಕೆ ಉಡುಪಿ ಡಾ.ಶಿವರಾಮ ಕಾರಂತ ಟ್ರಸ್ಟ್ ನ ನಿರ್ದೇಶಕ ಡಾ.ಗಣನಾಥ ಎಕ್ಕಾರು ಉದ್ಘಾಟಿಸುವರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು.
ಮುಲ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ವಾಸುದೇವ ಬೆಳ್ಳೆ ಸಂವಾದ ಕಾರ್ಯಕ್ರಮದ ಸಮನ್ವಯಕಾರರಾಗಿ ಭಾಗವಹಿಸುವರು ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು