3:47 AM Sunday18 - October 2026
ಬ್ರೇಕಿಂಗ್ ನ್ಯೂಸ್
ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20…

ಇತ್ತೀಚಿನ ಸುದ್ದಿ

ಡ್ರಗ್ಸ್ ಮಾರಾಟ | ಸಿಸಿಬಿ ಪೊಲೀಸರ ಕಾರ್ಯಾಚರಣೆ: ಇಬ್ಬರ ಬಂಧನ; 2.40 ಲಕ್ಷ ಮೌಲ್ಯದ ಮಾದಕ ವಸ್ತು ವಶ

07/11/2025, 20:23

ಮಂಗಳೂರು(reporterkarnataka.com):ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು ಮಂಗಳೂರು ನಗರದ ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಆರೋಪಿಗಳಿಂದ 24.57 ಗ್ರಾಂ ತೂಕದ MDMA ಮಾದಕ ವಸ್ತು ಎಂಡಿಎಂಎ ಅನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ನಗರದ ಬಂದರು ಮತ್ತು ದಕ್ಕೆಯ ಪರಿಸರದಲ್ಲಿ ಆಟೋ ರಿಕ್ಷಾದಲ್ಲಿ ಇದ್ದುಕೊಂಡು ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಸಿಸಿಬಿ ಪೊಲೀಸರು ಆಟೋ ಚಾಲಕ ಅಡ್ಯಾರ್, ಕಣ್ಣೂರು ನಿವಾಸಿ ಅಬ್ದುಲ್ ಸಲಾಮ್ (39)ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ ರೂ. 1,20,000/- ಮೌಲ್ಯದ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ, ಆಟೋ ರಿಕ್ಷಾ, ಮೊಬೈಲ್ ಪೋನ್, ತೂಕಮಾಪನ, ಖಾಲಿ ಜಿಪ್ ಲಾಕ್ ಕವರ, ಸಹಿತ ಒಟ್ಟು ರೂ. 2,30,500/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಇನ್ನೊಂದುವಪ್ರಕರಣದಲ್ಲಿ ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಬೋಳಿಯಾರು ಪರಿಸರದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಸಿಸಿಬಿ ಪೊಲೀಸರು,ಬೋಳಿಯಾರು ಜಾರದಗುಡ್ಡೆ ಹೌಸ್ ನಿವಾಸಿ ಮೊಹಮ್ಮದ್ ನಾಸೀರ್ @ ಶಾಕೀರ್@ ಚಾಕಿ (28)ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ ರೂ. 1,20,000/- ಮೌಲ್ಯದ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ, ಕಪ್ಪು ಬಣ್ಣದ ಯಮಹಾ ಕಂಪೆನಿಯ ಯಮಹಾ FZ ಬೈಕ್, ಮೊಬೈಲ್ ಪೋನ್, ಖಾಲಿ ಜಿಪ್ ಲಾಕ್ ಕವರ, ಸಹಿತ ಒಟ್ಟು ರೂ. 2,05,000/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು