ಇತ್ತೀಚಿನ ಸುದ್ದಿ
ಕೇಂದ್ರ ಪರಿಹರಿಸಬೇಕಾದ ಸಮಸ್ಯೆಗೂ ರಾಜ್ಯವನ್ನು ಒತ್ತಾಯಿಸಿದ್ರೆ ಹೇಗೆ: ರೈತ ಮುಖಂಡರಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ
08/11/2025, 11:40
ಬೆಂಗಳೂರು(reporterkarnataka.com): ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ಸಮಸ್ಯೆ ಬಗೆಹರಿಸಲು ನಾವು ಸಿದ್ದರಿದ್ದೇವೆ. ಆದರೆ, ಕೇಂದ್ರ ಸರ್ಕಾರ ಪರಿಹರಿಸಬೇಕಾದ ಸಮಸ್ಯೆಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ ಎಂದು ರೈತ ಮುಖಂಡರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ನೀವು ಕೇಂದ್ರದ ಮೇಲೆ ಒತ್ತಡ ಹೇರಿ ಸಮಸ್ಯೆ ಬಗೆಹರಿಯಬೇಕು ಎಂದು ಸಿಎಂ ಸೂಚಿಸಿದರು.
ಕಾರ್ಖಾನೆಗಳು ತೂಕದಲ್ಲಿ ಮೋಸ ಮಾಡುತ್ತಿವೆ. ಇಳುವರಿ ಕಡಿಮೆ ತೋರಿಸುತ್ತಿವೆ ಎಂದು ರೈತ ಮುಖಂಡರ ಆಕ್ರೋಶ ವ್ಯಕ್ತಪಡಿಸಿದರು.
FRP ದರ ನಿಗದಿ ಮಾಡುವಾಗ ಕೇಂದ್ರ ಅವೈಜ್ಞಾನಿಕ ಕ್ರಮ ಅನುಸರಿಸಿದೆ. ಉತ್ಪಾದನಾ ವೆಚ್ಚ ಹಿಂದಿನ ವರ್ಷಗಳಿಗಿಂತ 4 ಸಾವಿರ ಕಡಿಮೆ ತೋರಿಸಿದ್ದಾರೆ. ಇದ್ಯಾವ ಲೆಕ್ಕಾಚಾರ ರೈತ ಮುಖಂಡರು ಪ್ರಶ್ನಿಸಿದರು.
ಬಾಗಲಕೋಟೆಯಲ್ಲಿ ಕಾರ್ಖಾನೆಯೊಂದು ಹಿಂದಿನ ವರ್ಷದ ಬಾಕಿ ಉಳಿಸಿಕೊಂಡಿದೆ ಎಂದು ರೈತ ಮುಖಂಡರು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಶಿವಾನಂದ ಪಾಟೀಲ್, ಬಾಕಿ ತೀರಿಸಲು ಸೂಚನೆ ನೀಡಲಾಗಿದೆ ಎಂದರು.
ಸಕ್ಕರೆಗೆ ಎಮ್ಎಸ್ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರ. ಇದೇ ರೀತಿ ಕಬ್ಬಿಗೆ ಎಫ್ಆರ್ಪಿ ನಿಗದಿಪಡಿಸುವವರು ಕೇಂದ್ರ ಸರ್ಕಾರ. ಎಥೆನಾಲ್ ಹಂಚಿಕೆ ನಿಗದಿಪಡಿಸುವವರು ಕೇಂದ್ರ ಸರ್ಕಾರ. ಸಕ್ಕರೆ ರಫ್ತು ಮಿತಿ ನಿಗದಿಪಡಿಸುವವರು ಸಹ ಕೇಂದ್ರ ಸರ್ಕಾರ ಅಂತ ನೀವೇ ಹೇಳ್ತೀರಿ. ಅವರಿಂದ ಆಗಿರುವ ಸಮಸ್ಯೆಗೆ ರಾಜ್ಯ ಸರ್ಕಾರದಿಂದ ಪರಿಹಾರ ಕೇಳಿದರೆ ಹೇಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಮುಖಂಡರಿಗೆ ಪ್ರಶ್ನಿಸಿದರು.
ತೂಕದಲ್ಲಿ ಮೋಸ, ರಿಕವರಿ ಕಡಿಮೆ ತೋರಿಸುವುದು ಸೇರಿದಂತೆ ಸಕ್ಕರೆ ಕಾರ್ಖಾನೆಗಳ ಕುರಿತು ಕಬ್ಬು ಬೆಳೆಗಾರರಿಗೆ ಇರುವ ಎಲ್ಲಾ ಅಹವಾಲುಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.


ಕೇಂದ್ರ ಸರ್ಕಾರ ಕಬ್ಬಿಗೆ ನಿಗದಿಪಡಿಸಿರುವ ಎಫ್ಆರ್ಪಿ ವೈಜ್ಞಾನಿಕವಾಗಿಲ್ಲ. ಸಕ್ಕರೆ ಕಾರ್ಖಾನೆಗಳು ಇಳುವರಿ ರಿಕವರಿ ಕಡಿಮೆ ತೋರಿಸುತ್ತಿವೆ. ಇದನ್ನು ತಪ್ಪಿಸಲು ಪ್ರತಿ ಕಾರ್ಖಾನೆ ಎದುರು ಸರ್ಕಾರದ ವತಿಯಿಂದ ಪ್ರಯೋಗಾಲಯ ತೆರೆಯಬೇಕು. ಕೆಲವು ಕಾರ್ಖಾನೆಗಳು ಹಳೆಯ ಬಾಕಿಯನ್ನು ಉಳಿಸಿಕೊಂಡಿದ್ದು, ಇದರ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಮನವಿ ಮಾಡಿದರು.












