ಇತ್ತೀಚಿನ ಸುದ್ದಿ
ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ
09/11/2025, 10:05
*ಕೇಂದ್ರ ಕೊಟ್ಟ FRP ದರ ₹3,550, ರೈತರು ಕೇಳಿದ್ದು ₹3500, ರಾಜ್ಯ ಸರ್ಕಾರ ಕೊಟ್ಟಿದ್ದು ₹₹3,300*
*ತಾನು ತಪ್ಪು ಮಾಡಿ ಕೇಂದ್ರವನ್ನು ದೂರುತ್ತಿರುವ ರಾಜ್ಯ ಸರ್ಕಾರ ಎಂದು ಕಿಡಿ*
ಬೆಂಗಳೂರು(reporterkarnataka.com): ಕಬ್ಬು ಬೆಳೆಗಾರರಿಗೆ ಕಿವಿಯಲ್ಲಿ ಹೂವು ಇಟ್ಟು ರಾಜ್ಯ ಸರ್ಕಾರ ದೊಡ್ಡ ದೋಖಾ ಮಾಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸಚಿವರು; ಕಬ್ಬು ಬೆಳೆಗಾರರಿಗೆ 100 ಹೆಚ್ಚಳ ಮಾಡಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರಲ್ಲದೆ, ರೈತರನ್ನು ನಂಬಿಸಿ ಮೋಸ ಮಾಡಿದೆ ಎಂದು ದೂರಿದರು.
ಸಿಎಂ ಅವರು ಮೋದಿಗೆ ಅವರಿಗೆ ಪತ್ರ ಬರೆದು ಅವರ ಮೇಲೆ ಗೂಬೆ ಕೂರಿಸೋ ಕೆಲಸ ಮಾಡಿದರು. ಹಿಂದೆ ಒಮ್ಮೆ ವಿಧಾನಸಭೆಯಲ್ಲಿ ಇದೇ ಸಿಎಂ, ಡಿಸಿಎಂ ಸೇವಂತಿಗೆ ಹೂವನ್ನ ಕಿವಿ ಮೇಲೆ ಇಟ್ಟುಕೊಂಡು ಬಂದಿದ್ದರು. ಅಂದು ಕಿವಿಗೆ ಹೂ ಮುಟ್ಟಿದ್ದ ಇವರು ಇಂದು ಎರಡೂವರೆ ವರ್ಷದಲ್ಲಿ ನಿತ್ಯವೂ ಜನರಿಗೆ ಕಿವಿಗೆ ಹೂ ಮುಡಿಸುದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಧಾನಿ ಮೋದಿ ಅವರು ಕಬ್ಬಿಗೆ FRP ದರ ಎಂದು ಕ್ವಿಂಟಲ್ ಗೆ ₹3,550 ನಿಗದಿ ಮಾಡಿದ್ದಾರೆ. ಅದ್ರೆ ಶುಕ್ರವಾರದ ದಿನ ಸಿಎಂ,ಡಿಸಿಎಂ ಮ್ಯಾರಾಥಾನ್ ಸಭೆ ಮಾಡಿದರು. ದಿನಪೂರ್ತಿ ಸಭೆ ₹100 ಮಾತ್ರ ಜಾಸ್ತಿ ಮಾಡಿದ್ದಾರೆ. ಕೇಂದ್ರ ಸರ್ಕಾರ ₹3550 FRPನಿಗದಿ ಮಾಡಿದೆ. ರೈತರು ಕೇಳಿದ್ದು ₹3500 ಬೆಲೆಯನ್ನು. ಸರ್ಕಾರ ಮ್ಯಾರಥಾನ್ ಸಭೆ ಮಾಡಿ ಕೊಟ್ಟಿದ್ದು ₹3,300 ಮಾತ್ರ. ಹಾಗಾದ್ರೆ ಇವರು ರೈತರಿಗೆ ಕೊಟ್ಟಿದ್ದೇನು? ಸರ್ಕಾರ ಮಾಡಿರುವ ಮೋಸವನ್ನು ಪ್ರಶ್ನೆ ಮಾಡದೇ ರೈತರು ಸಂತೋಷಪಟ್ಟರೆ ನನ್ನದೇನು ಅಭ್ಯಂತರ ಇಲ್ಲ. ಆದರೆ, ಸರ್ಕಾರ ರೈತ ಕುಟುಂಬಗಳಿಗೆ ದೋಖಾ ಮಾಡಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.














