6:49 PM Saturday1 - August 2026
ಬ್ರೇಕಿಂಗ್ ನ್ಯೂಸ್
ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು

ಇತ್ತೀಚಿನ ಸುದ್ದಿ

ಮತಗಳ್ಳತನ ವಿರುದ್ಧ ಅಭಿಯಾನ; ರಾಜ್ಯದಲ್ಲಿ 1,12,41,000 ಸಹಿ ಸಂಗ್ರಹಿಸಿ ಎಐಸಿಸಿಗೆ ಹಸ್ತಾಂತರ

10/11/2025, 18:56

ನವದೆಹಲಿ(reporterkarmataka.com): ಮತ ಕಳ್ಳತನ ವಿರುದ್ಧದ ಸಹಿ ಸಂಗ್ರಹ ಅಭಿಯಾನವನ್ನು ಕರ್ನಾಟಕದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಸಂಗ್ರಹಿಸಲಾದ 1,12,41,000 ಸಹಿಗಳ ದಾಖಲೆಗಳನ್ನು ಎಐಸಿಸಿಗೆ ಸಲ್ಲಿಸಿದರು.
ದೆಹಲಿಯಲ್ಲಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ ಶಿವಕುಮಾರ್ ಅವರ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಮುಖಂಡರ ನಿಯೋಗವು ಸಹಿ ಸಂಗ್ರಹ ದಾಖಲೆಗಳ ಒಂದು ಪೆಟ್ಟಿಗೆಯನ್ನು ಸಾಂಕೇತಿಕವಾಗಿ ಸಲ್ಲಿಸಿದರು. ನಂತರ ಉಳಿದ ಪೆಟ್ಟಿಗೆಗಳನ್ನು ಎಐಸಿಸಿ ನೂತನ ಕಟ್ಟಡ ಇಂದಿರಾ ಭವನದಲ್ಲಿ ಎಐಸಿಸಿ ಕಾರ್ಯದರ್ಶಿ ನೆಟ್ಟ ಡಿಸೋಜ ಅವರಿಗೆ ಹಸ್ತಾಂತರಿಸಲಾಯಿತು.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ 40 ಜಿಲ್ಲೆಗಳಲ್ಲಿ (ರಾಜಕೀಯ ಉದ್ದೇಶಕ್ಕಾಗಿ ರಚಿಸಿಕೊಂಡಿರುವ ಜಿಲ್ಲೆಗಳು) ಸಹಿ ಸಂಗ್ರಹಿಸಲಾಗಿದೆ. ರಾಜ್ಯದಲ್ಲಿ ನಡೆದ ಅಭಿಯಾನದಲ್ಲಿ ಅತಿ ಹೆಚ್ಚು ಸಹಿ ಸಂಗ್ರಹಿಸಿದ ಜಿಲ್ಲಾಧ್ಯಕ್ಷರುಗಳು ಕೂಡ ಶಿವಕುಮಾರ್ ಅವರ ಜೊತೆಯಲ್ಲಿ ದೆಹಲಿಗೆ ಹೋಗಿ ಸಹಿ ಸಂಗ್ರಹ ದಾಖಲೆಗಳನ್ನು ನೀಡಿದ್ದಾರೆ.
ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್, ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ ಜಿ ಸಿ ಚಂದ್ರಶೇಖರ್, ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಸೊರಕೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು