4:12 AM Sunday28 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

Mangaluru | ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿಯ ಸೆರೆ

10/11/2025, 19:08

ಮಂಗಳೂರು(reporterkarnataka.com):ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ, ಮಾಲಾಡಿ ಗ್ರಾಮದ ನಿವಾಸಿ ಪ್ರಕಾಶ್‌ ಶೆಟ್ಟಿ (53) ಎಂಬವರ ದೂರಿನಂತೆ, ಸದ್ರಿಯವರ ಮನೆಯ ಸಮೀಪ ಪ್ರೇಮಾ ಶೆಟ್ಟಿ ಎಂಬವರ ಮನೆಯಿದ್ದು, ಪ್ರೇಮಾ ಶೆಟ್ಟಿರವರು ಕೆಲ ಸಮಯದಿಂದ ವಿದೇಶದಲ್ಲಿದ್ದು, ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಗೆ ಸಿ.ಸಿ ಟಿ.ವಿ ಅಳವಡಿಸಿರುತ್ತಾರೆ. ದಿನಾಂಕ:9/11/2025 ರಂದು ಬೆಳಿಗ್ಗೆ, ಪ್ರೇಮಾರವರ ಮಗಳು ಪಿರ್ಯಾದಿದಾರರಿಗೆ ಕರೆ ಮಾಡಿ ಅವರ ತಾಯಿಯ ಮನೆಯಲ್ಲಿ ಯಾರೋ ವ್ಯಕ್ತಿ ಕಳ್ಳತನಕ್ಕೆ ಬಂದಿರುವಂತೆ ಸಿ.ಸಿ ಟಿ.ವಿಯಲ್ಲಿ ಕಾಣುತ್ತಿರುವುದಾಗಿ ತಿಳಿಸಿರುತ್ತಾರೆ. ತಕ್ಷಣ ಪಿರ್ಯಾದಿದಾರರು ಪ್ರೇಮರವರ ಮನೆಯ ಬಳಿ ತೆರಳಿ ನೋಡಿದಾಗ, ಪ್ರೇಮಾರವರ ಮನೆಯ ಮೇಲ್ಚಾವಣಿಯಲ್ಲಿ ಒಬ್ಬ ಅಪರಿಚಿತ ವ್ಯಕ್ತಿಯು ಕೈಯಲ್ಲಿ ಕಬ್ಬಿಣದ ರಾಡ್ ಹಿಡಿದು ನಿಂತುಕೊಂಡಿದ್ದು, ಪಿರ್ಯಾದಿದಾರರನ್ನು ನೋಡಿ ಕೆಳಗೆ ಹಾರಿ ಓಡಿ ತಪ್ಪಿಸಲು ಪ್ರಯತ್ನಿಸಿರುತ್ತಾನೆ. ಈ ವೇಳೆ ಪಿರ್ಯಾದಿದಾರರು ಆತನನ್ನು ಹಿಡಿಯಲು ಪ್ರಯತ್ನಿಸಿದಾಗ, ಸದ್ರಿ ಅಪರಿಚಿತ ವ್ಯಕ್ತಿಯು ಆತನ ಕೈಯಲ್ಲಿದ್ದ ರಾಡಿನಿಂದ ಹಲ್ಲೆ ನಡೆಸಿರುತ್ತಾನೆ. ಬಳಿಕ ಸ್ಥಳೀಯ ನಿವಾಸಿಗಳ ಸಹಾಯದಿಂದ ಅಪರಿಚಿತ ವ್ಯಕ್ತಿಯನ್ನು ಹಿಡಿಯಲಾಗಿರುತ್ತದೆ. ಆತನ ಬಗ್ಗೆ ವಿಚಾರಿಸಲಾಗಿ ಆತನು ಕೇರಳ ಮೂಲದ, ತಲಪಾಡಿ ನಿವಾಸಿ ಕಿರಣ್ ಎಂಬುದಾಗಿ ತಿಳಿಸಿದ್ದು, ನಂತರ ಆತನನ್ನು ಪೂಂಜಾಲಕಟ್ಟೆ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಲಾಗಿರುತ್ತದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ: 73/2025, ಕಲಂ: 331(1) 62 118(1) 307 BNS ACT ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಆರೋಪಿತನ ಪ್ರಾಥಮಿಕ ವಿಚಾರಣೆಯ ವೇಳೆ ಆರೋಪಿತನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ, ಮಂಗಳೂರು ನಗರ ವ್ಯಾಪ್ತಿಯಲ್ಲಿ ಹಾಗೂ ಕೇರಳ ರಾಜ್ಯದಲ್ಲಿ ಸೇರಿದಂತೆ, ಒಟ್ಟು 13 ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದ್ದು, ತನಿಖೆ ಮುಂದುವರಿದಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು