9:57 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಮೈಸೂರಿನಲ್ಲಿ ಉಪರಾಷ್ಟ್ರಪತಿ ಸಿ. ಪಿ ರಾಧಾಕೃಷ್ಣನ್ ಟೆಂಪಲ್ ರನ್: ಹಲವು ಕಾರ್ಯಕ್ರಮದಲ್ಲಿ ಭಾಗಿ

11/11/2025, 10:59

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಮೈಸೂರಿಗೆ ಭಾನುವಾರ ಮಧ್ಯಾಹ್ನ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಶಿಷ್ಟಾಚಾರದ ಪ್ರಕಾರ ಬರಮಾಡಿಕೊಳ್ಳಲಾಯಿತು.
ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಇಲ್ಲಿನ ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ಬಂದಿಳಿದ ಅವರನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್, ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ದಕ್ಷಿಣ ವಲಯ ಡಿಐಜಿಪಿ ಡಾ.ಎಂ.ಬಿ. ಬೋರಲಿಂಗಯ್ಯ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ, ನಗರ ಪೊಲೀಸ್ ಕಮಿಷನರ್‌ ಸೀಮಾ ಲಾಟ್ಕರ್‌ ಮೊದಲಾದವರು ಬರಮಾಡಿಕೊಂಡರು.
ಉಪ ರಾಷ್ಟ್ರಪತಿಯಾದ ನಂತರ ಇದೇ ಮೊದಲ ಬಾರಿಗೆ ನಗರಕ್ಕೆ ಭೇಟಿ ನೀಡಿರುವ ರಾಧಾಕೃಷ್ಣನ್ ಅವರು, ಶಿವರಾತ್ರೀಶ್ವರ ನಗರದಲ್ಲಿರುವ ಜೆಎಸ್‌ಎಸ್‌ ವೈದ್ಯಕೀಯ ಕಾಲೇಜು ಕ್ಯಾಂಪಸ್‌ನಲ್ಲಿರುವ ರಾಜೇಂದ್ರ ಸಭಾಂಗಣದಲ್ಲಿ ನಡೆಯಲಿರುವ ಜೆಎಸ್‌ಎಸ್‌ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ (ಜೆಎಸ್‌ಎಸ್‌-ಎಎಚ್‌ಇಆರ್‌) 16ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡರು. ನಂತರ ಚಾಮುಂಡಿಬೆಟ್ಟದ ಪಾದದಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಮಧ್ಯಾಹ್ನ 3ರ ಸುಮಾರಿಗೆ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಅವರು ಭೇಟಿ ಕೊಡುತ್ತಿರುವ ಕಾರಣದಿಂದಾಗಿ, ಮಧ್ಯಾಹ್ನ 2ರಿಂದ ಸಂಜೆ 4ರವರೆಗೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು