ಇತ್ತೀಚಿನ ಸುದ್ದಿ
Mandya | ಮೇಲುಕೋಟೆ ಚೆಲುವರಾಯಸ್ವಾಮಿ ದರ್ಶನ ಪಡೆದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್
11/11/2025, 11:06
ಗಿರಿಧರ್ ಕೊಂಪುಳಿರ ಮೈಸೂರು
info.reporterkarnataka@gmail.com
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಗೆ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರು ವಿಶೇಷ ಸೇನಾ ಹೆಲಿಕಾಪ್ಟರ್ ಮೂಲಕ ಬಂದು ಚೆಲುವರಾಯಸ್ವಾಮಿ ದೇವರ ದರ್ಶನ ಪಡೆದರು.

ಇದೇ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್, ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ, ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಇತರರು ಉಪಸ್ಥಿತರಿದ್ದರು.












