2:44 AM Tuesday22 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ: ಸಿಎಂ

11/11/2025, 12:29

*ಶಿಕ್ಷೆ ಪ್ರಮಾಣ ಹೆಚ್ಚಾಗಲು ಕ್ರಮ ವಹಿಸುವಂತೆ ಪೊಲೀಸ್ ಅಧಿಕಾರಿಗಳು, ಆಯುಕ್ತರು, ಐಜಿ ಅವರಿಗೆ ಸೂಚನೆ ನೀಡಿದ್ದೇನೆ: ಸಿಎಂ*

*ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿ ಮಾಡಿ: ಕೆಡಿಪಿ ಸಭೆಯಲ್ಲಿ ಸೂಚಿಸಿದ್ದೇನೆ*

ಮೈಸೂರು(reporterkarnataka.com): ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು. ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ ನೀಡಿದ್ದೇನೆ.
ಶಿಕ್ಷೆ ಪ್ರಮಾಣ ಹೆಚ್ಚಾಗಲು ಕ್ರಮ ವಹಿಸುವಂತೆ ಪೊಲೀಸ್ ಅಧಿಕಾರಿಗಳು, ಆಯುಕ್ತರು, ಐಜಿ ಅವರಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಸೂರಿನ ತಪ್ಪ ನಿವಾಸದಲ್ಲಿ ಸೋಮವಾರ ನಡೆದ KDP ಸಭೆಯ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದರು.
ಪೊಲೀಸ್ ಅಧಿಕಾರಿಗಳಿಗೆ ಗೊತ್ತಿಲ್ಲದೆ ಸಂಘಟಿತ ಅಪರಾಧಗಳು ನಡೆಯಲು ಸಾಧ್ಯವಿಲ್ಲ. ಆದ್ದರಿಂದ ಅಪರಾಧ ಪ್ರಮಾಣಗಳು ಹೆಚ್ಚಾದರೆ ಪೊಲೀಸ್ ಅಧಿಕಾರಿಗಳೇ ಹೊಣೆ ಆಗ್ತಾರೆ. ಮೈಸೂರು ಜಿಲ್ಲೆಯನ್ನು ಡ್ರಗ್ ಮುಕ್ತ ಜಿಲ್ಲೆ ಮಾಡಲು ಸೂಚನೆ ನೀಡಿದ್ದೇನೆ ಎಂದರು.
ಕೋಮುಗಲಭೆ ಪೀಡಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿದ ತಕ್ಷಣ ಇಡೀ‌ ಜಿಲ್ಲೆಯಲ್ಲಿ ಈಗ ಅನಾಗರಿಕ ಘಟನೆಗಳು ಬಂದ್ ಆಗಿವೆ. ಅಲ್ಲಿ ಇಬ್ಬರು ಅಧಿಕಾರಿಗಳಿಂದ ಇಷ್ಟೆಲ್ಲಾ ಸಾಧ್ಯ ಆಗುತ್ತೆ ಎನ್ನುವುದಾದರೆ ಉಳಿದ ಕಡೆಗಳಲ್ಲೂ ಸಾಧ್ಯವಿದೆ. ಪೊಲೀಸ್ ಅಧಿಕಾರಿಗಳು ಮನಸ್ಸು ಮಾಡಿ, ವೃತ್ತಿಪರವಾಗಿ ನಡೆದುಕೊಂಡರೆ ಸಾಕು ಎನ್ನುವ ಸೂಚನೆ ನೀಡಿದ್ದೇನೆ ಎಂದರು.
DC, AC, ತಹಶೀಲ್ದಾರ್ ನ್ಯಾಯಾಲಯಗಳಲ್ಲಿನ ಪ್ರಕರಣಗಳನ್ನು ಶೀರ್ಘ ಇತ್ಯರ್ಥ ಪಡಿಸಲು ಸೂಚನೆ ನೀಡಿದ್ದೇನೆ. ಮೈಸೂರು ಜಿಲ್ಲೆಯಲ್ಲಿ ಕಳೆದ ಎರಡೂ ವರ್ಷಗಳಲ್ಲಿ ಇದ್ದ 8 ಸಾವಿರ ಪ್ರಕರಣಗಳಲ್ಲಿ ಈಗಾಗಲೇ 7540 ರಷ್ಟು ಪ್ರಕಣಗಳು ಇತ್ಯರ್ಥ ಆಗಿವೆ. ಉಳಿದವೂ ಬೇಗ ಇತ್ಯರ್ಥ ಆಗಬೇಕು ಎನ್ನುವ ಸೂಚನೆ ನೀಡಿದ್ದೇನೆ ಎಂದು ಅವರು ನುಡಿದರು.
ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಸ್ಟೆಲ್ ಗಳಿಗೆ ದಿಡೀರ್ ಭೇಟಿ ನೀಡಿ ಊಟ ಮತ್ತು ಹಾಸ್ಟೆಲ್ ಗುಣಮಟ್ಟ ಪರಿಶೀಲಿಸಬೇಕು ಎನ್ನುವ ಸೂಚನೆ ನೀಡಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು