11:03 PM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಹಾರಂಗಿ ಹಿನ್ನೀರಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳ ದಾರುಣ ಸಾವು: ಓರ್ವನ ಮೃತದೇಹ ಪತ್ತೆ

12/11/2025, 21:46

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail com

ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನಪ್ಪಿದ್ದು ಓರ್ವನ ಮೃತದೇಹ ನೀರಿನಲ್ಲಿ ಪತ್ತೆ ಆಗಿದೆ.
ಮಡಿಕೇರಿ ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ, ಹೆಬ್ಬಟಗೇರಿಯ ಪುವಯ್ಯ ಎಂಬುವವರ ಪುತ್ರ ಚಂಗಪ್ಪ (17) ರವರ ಮೃತ ದೇಹವನ್ನು ಪತ್ತೆಹಚ್ಚಿ ನೀರಿನಿಂದ ಮೇಲಕ್ಕೆ ತರಲಾಗಿದೆ. ಇದೇ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ, ಮಡಿಕೇರಿ ರಾಜಸೀಟ್ ನಿವಾಸಿ ತಿಮ್ಮಯ್ಯರವರ ಪುತ್ರ ತರುಣ್ ತಮ್ಮಯ್ಯ (17) ಅವರ ಮೃತದೇಹ ಪತ್ತೆ ಆಗಿರುವುದಿಲ್ಲ. ಸಂಜೆ ಕತ್ತಲಾವರಿಸಿದ್ದರಿಂದ ಮತ್ತು ಕಾಡಾನೆಗಳ ಹಾವಳಿ ಇರುವುದರಿಂದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.
ಮಡಿಕೇರಿ ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ, ರಾಣಿಪೇಟೆಯ ಮುತ್ತಣ್ಣರವರ ಪುತ್ರ ನವೀನ್ ಪೊನ್ನಪ್ಪ (17) ಎಂಬಾತ ಈಜಿನ ನಡುವೆ ದಡಕ್ಕೆ ಬಂದು ಜೀವ ಉಳಿಸಿಕೊಂಡಿದ್ದಾನೆ.
ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಮೋಹನ್ ರಾಜ್ ಮತ್ತು ಸಿಬ್ಬಂದಿಗಳು, ಕುಶಾಲನಗರ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮತ್ತು ದುಬಾರೆ Rafting ತಂಡದವರು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು