11:33 PM Tuesday22 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

New Delhi | ಬಿಡುಗಡೆಯಾಗದ ಬಿಸಿಯೂಟ ಅನುದಾನ; ಹಸಿವು ನೀಗಿಸೋ ಸಿಎಂ ಬದ್ಧತೆಗೇನಾಯಿತು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನೆ

13/11/2025, 09:57

ನವದೆಹಲಿ(reporterkarnataka.com): ʼಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಬಡ ಜನರ ಹಸಿವು ನೀಗಿಸುವ ನಿಮ್ಮ ಬದ್ಧತೆ ಎಲ್ಲಿ ಹೋಯಿತು?ʼ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದ್ದಾರೆ.
ರಾಜ್ಯದ ಪ್ರಾಥಮಿಕ- ಪ್ರೌಢಶಾಲೆಗಳಿಗೆ ಬಿಸಿಯೂಟ ಅನುದಾನ ಬಿಡುಗಡೆ ಮಾಡದೆ ಹಾಗೂ ಬಿಸಿಯೂಟ ತಯಾರಕರಿಗೆ ಸಕಾಲಿಕ ವೇತನ ನೀಡದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವರು, ಈ ಸರ್ಕಾರ ಶಾಲಾ ಮಕ್ಕಳ ಹೊಟ್ಟೆ ಮೇಲೂ ತಣ್ಣೀರು ಬಟ್ಟೆ ಹಾಕುತ್ತಿದೆ ಎಂದು ಹರಿ ಹಾಯ್ದಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ವೇದಿಕೆ ಸಿಕ್ಕಾಗಲೆಲ್ಲ ಬಡ ಜನರ ಹಸಿವು ನೀಗಿಸುವ ಕುರಿತೇ ಮಾತೆತ್ತುತ್ತಾರೆ. ಆದರೆ, ಶಾಲೆಗಳಲ್ಲಿ ಎಳೆ ಮಕ್ಕಳ ಬಿಸಿಯೂಟಕ್ಕೇ ಕುತ್ತು ತಂದಿದ್ದಾರೆ. ಇದೆಂಥಾ ನೀತಿ ಎಂದು ಟೀಕಿಸಿರುವ ಜೋಶಿ, ಇದೇನಾ ಇವರ ಹಸಿವು ನೀಗಿಸುವ ಬದ್ಧತೆ? ಕಿಡಿ ಕಾರಿದ್ದಾರೆ.

*ಸಿಎಂ ಗಟ್ಟಿ ಧ್ವನಿಗೇನಾಯಿತು?:* ಮುಖ್ಯಮಂತ್ರಿಗಳು ಸಾರ್ವಜನಿಕ ಸಭೆ-ಸಮಾರಂಭಗಳಲ್ಲಿ “ಹ..ತ್ತು ಕೆಜಿ ಅಕ್ಕಿ ಬೇಕಾ.. ಬೇಡ್ವಾ.?” ಎಂದು ಗಟ್ಟಿ ಧ್ವನಿಯಲ್ಲೇ ಕೇಳುತ್ತಿದ್ದರು. ಆದರೆ, ಪ್ರಾಥಮಿಕ-ಪ್ರೌಢಶಾಲೆಗಳಲ್ಲಿ ಮಕ್ಕಳು ಮಧ್ಯಾಹ್ನದ ಬಿಸಿಯೂಟ ಸಿಗದೆ ಹಸಿವಿನಲ್ಲಿದ್ದಾರೆ. ಹಾಗಿದ್ದರೂ ಸಿಎಂ ಮೌನ ವಹಿಸಿದ್ದಾರೆ. ಸಿಎಂ ಕುರ್ಚಿ ಗುದ್ದಾಟದಲ್ಲಿ ಸಿಎಂ ಗಟ್ಟಿ ಧ್ವನಿ ಉಡುಗಿದೆಯೇ? ಎಂದಿದ್ದಾರೆ ಸಚಿವ ಪ್ರಲ್ಹಾದ ಜೋಶಿ.

*ಬಿಸಿಯೂಟಕ್ಕೂ ಕುತ್ತು ತರುವಷ್ಟು ಖಜಾನೆ ಬರಿದು:* ಯಾವತ್ತೂ ಅನ್ನಭಾಗ್ಯವನ್ನೇ ಕನವರಿಸುತ್ತಿದ್ದ ಸಿಎಂ ಒಮ್ಮೆಯಾದರೂ ಶಾಲಾ ಮಕ್ಕಳ ಬಿಸಿಯೂಟದ ಬಗ್ಗೆ ಕಾಳಜಿ ತೋರಿದ್ದಿದೆಯೇ? ಬಿಸಿಯೂಟ ಅನುದಾನ ಒದಗಿಸುವ ಬಗ್ಗೆ ಗಮನ ಹರಿಸದಿರುವುದು ಮಕ್ಕಳ ದೌರ್ಭಾಗ್ಯವೇ ಸರಿ ಎಂದು ಖಂಡಿಸಿದ್ದಾರೆ.
ರಾಜ್ಯದ ಶಾಲೆಗಳಲ್ಲಿ ಕೇಂದ್ರ ಸರ್ಕಾರದ ಅನುದಾನ ಮತ್ತು ಇತರೆ ಮೂಲಗಳಿಂದ ಬಿಸಿಯೂಟ ನಿರ್ವಹಿಸಿಕೊಂಡು ಬರಲಾಗುತ್ತಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರದ ಆಡಳಿತದಲ್ಲಿ ಮಕ್ಕಳ ಬಿಸಿಯೂಟಕ್ಕೂ ಕುತ್ತು ತರುವಷ್ಟು ಖಜಾನೆ ಬರಿದು ಮಾಡಿರುವುದು ರಾಜ್ಯದ ದುರಂತ ಎಂದು ವಾಗ್ದಾಳಿ ನಡೆಸಿದ್ದಾರೆ.

*ವಿದ್ಯುತ್‌ ಕಂಪನಿಗಳಿಗೂ ಬಾಕಿ:* ಕಾಂಗ್ರೆಸ್ ಸರ್ಕಾರದ ದುರಾಡಳಿತ ಮತ್ತು ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು ದಿವಾಳಿತನದತ್ತ‌ ಸಾಗಿವೆ. ಸರ್ಕಾರಿ‌ ಸ್ವಾಮ್ಯದ ‌ಸಂಸ್ಥೆಗಳು, ಕಂಪನಿಗಳನ್ನು ಸಂಕಷ್ಟಕ್ಕೆ ತಳ್ಳಿದ್ದಾರೆ ಎಂದು ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
ವಿದ್ಯುತ್‌ ಕಂಪನಿಗಳಿಗೆ ಸಾವಿರಾರು ಕೋಟಿ ರೂಪಾಯಿ ಬಾಕಿ ಪಾವತಿಸದೆ, ಜನರ ಮೇಲೆ ಹೊರೆ ಹಾಕಿ, ದೈನಂದಿನ ಜೀವನ ದುಸ್ಥರಗೊಳಿಸುತ್ತಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ ಮನಸೋ ಇಚ್ಛೆ ಆಡಳಿತ ನಡೆಸುತ್ತಿದೆ. ಇದು ಕಾಂಗ್ರೆಸ್ ಸರ್ಕಾರದ ದುರಾಡಳಿತದ ಪರಮಾವಧಿ ಎಂದು ಸಚಿವ ಜೋಶಿ ಖಂಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು