ಇತ್ತೀಚಿನ ಸುದ್ದಿ
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ
14/11/2025, 21:56
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಎಂ. ಚೆಂಬು ಗ್ರಾಮದಲ್ಲಿ ನಡೆದ ಮನೆಗಳ್ಳತನ ಪ್ರಕರಣ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಗ್ರಾಮದ ವೀರಪ್ಪ ಎಂಬುವವರ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಬೀರು ನಲ್ಲಿ ಇದ್ದ 15 ಸಾವಿರ ನಗದು, 120 ಗ್ರಾಂ ನಷ್ಟು ಚಿನ್ನಾಭರಣ ಕಳ್ಳತನ ವಾಗಿರುವ ಬಗ್ಗೆ ದೂರು ದಾಖಲಾಗಿದ್ದು,ತನಿಖೆ ಕೈ ಗೊಂಡ ಪೊಲೀಸರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಸಿದ್ದಲಿಂಗು (28) ಮತ್ತು ರಘು (26) ಅವರನ್ನು ಬಂಧಿಸಿ ಕಳುವಾದ ಹಣ ಮತ್ತು ಚಿನ್ನಾಭರಣ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.












