ಇತ್ತೀಚಿನ ಸುದ್ದಿ
ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ ಪೊಲೀಸ್ ಕ್ರಮ
15/11/2025, 11:08
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಪದ ಬಳಕೆ ಆರೋಪದ ಹಿನ್ನಲೆಯಲ್ಲಿ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 296 ಪ್ರಕಾರ ಪ್ರಕರಣ ದಾಖಲಾಗಿದೆ.
ಚನ್ನಪಟ್ಟಣ ಮೂಲದ ಶರತ್ ಎಂಬಾತ ಸಾಮಾಜಿಕ ಜಾಲ ತಾಣದಲ್ಲಿ ಅವಾಚ್ಯ ಶಬ್ದ ಪ್ರಯೋಗ ಮಾಡಿರುವ ಹಿನ್ನಲೆಯಲ್ಲಿ,
ಮಡಿಕೇರಿಯ ವಕೀಲ ಪವನ್ ಪೆಮ್ಮಯ್ಯ ದೂರನ್ನು ಸಲ್ಲಿಸಿದ್ದು ಆರೋಪಿ ಪತ್ತೆಗೆ ಪೋಲೀಸರಿಂದ ಕ್ರಮ ಕೈಗೊಳ್ಳಲಾಗಿದೆ.












