ಇತ್ತೀಚಿನ ಸುದ್ದಿ
Kodagu | ಮಾಲ್ದಾರೆ ಲಿಂಗಾಪುರ ಚೆಕ್ ಪೋಸ್ಟ್ | ಕಾರಿನಲ್ಲಿ ಮಹಿಳೆಯ ಶವ ಸಾಗಾಟ: ಕೊಲೆ ಶಂಕೆ; 3 ಮಂದಿ ಬಂಧನ
15/11/2025, 20:25
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಮಾಲ್ದಾರೆ ಲಿಂಗಪುರ ಫಾರೆಸ್ಟ್ ಚೆಕ್ ಪೋಸ್ಟ್ ನಲ್ಲಿ ಮಧ್ಯರಾತ್ರಿ ಅನುಮಾನಗೊಂಡು ಕಾರೊಂದನ್ನು ತಪಾಸಣೆ ಮಾಡಿದಾಗ ಮಹಿಳೆಯ ಶವ ಪತ್ತೆಯಾಗಿದ್ದು, ಮೂವರನ್ನು ಬಂಧಿಸಲಾಗಿದೆ.

ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿ ಕಾರಿನಲ್ಲಿದ್ದ ಮೂವರನ್ನ ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಹರಿಯಾಣ ಮೂಲದ ಮಹಿಳೆ ಮೈಸೂರಿನಲ್ಲಿ ಪತಿಯೊಂದಿಗೆ ವಾಸವಾಗಿದ್ದ ನಾನ್ಕಿದೇವಿ (45) ಎಂಬುವರನ್ನು ಕೊಲೆ ಮಾಡಲಾಗಿದೆ. ಆರೋಪಿಗಳು ಕೊಲೆ ಮಾಡಿ ಮಹಿಳೆಯ ಶವವನ್ನು ಕಾರಿನಲ್ಲಿ ಸಾಗಾಟ ಮಾಡಿರೋದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸಿದ್ಧಾಪುರ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.












