4:38 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು ಪರಾರಿ

15/11/2025, 20:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಪಟ್ಟಣದಲ್ಲಿ ನೀಲಂ ಸೇಠ್ (ಮಾರ್ವಾಡಿ) ಅವರ ಕಾಳುಮೆಣಸು ಗೋಡೌನ್‌ನಲ್ಲಿ ದೊಡ್ಡ ಮಟ್ಟದ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಗೋಡೌನ್‌ನಲ್ಲಿದ್ದ ಸುಮಾರು 80 ಮೂಟೆ (ಸುಮಾರು 1,800 ಕೆ.ಜಿ.) ಕಾಳುಮೆಣಸು ಅಜ್ಞಾತರು ಕಳವುಮಾಡಿರುವುದು ಪತ್ತೆಯಾಗಿದೆ.
ಖಚಿತ ಮಾಹಿತಿಯ ಮೇರೆಗೆ ಸರ್ಕಲ್ ಇನ್ಸ್‌ಪೆಕ್ಟರ್ ರಾಜಶೇಖರ್ ಅವರ ನೇತೃತ್ವದಲ್ಲಿ ಸಬ್‌ಇನ್ಸ್‌ಪೆಕ್ಟರ್ ಶ್ರೀನಾಥ್ ರೆಡ್ಡಿ ಹಾಗೂ ಪೊಲೀಸರು ದಾಳಿ ನಡೆಸಿ, ಬಾಪುನಗರದ ಸಬೀನಾ ಎಂಬ ಮಹಿಳಾ ಆರೋಪಿಯನ್ನು ಬಂಧಿಸಿದ್ದಾರೆ. ಇನ್ನೂ ಮೂವರು ಆರೋಪಿಗಳು — ಮತ್ತೊಬ್ಬ ಮಹಿಳೆ ಹಾಗೂ ಇಬ್ಬರು ಪುರುಷರು — ಪರಾರಿಯಾಗಿದ್ದು, ಅವರ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದೆ.
ಐದು ಬಾಗಿಲುಗಳಿರುವ ಗೋಡೌನ್‌ಗೆ ಕಳ್ಳರು ಒಂದೇ ಬಾಗಿಲಿನ ಮೂಲಕ ನುಗ್ಗಿದ್ದಾರೆ ಎನ್ನಲಾಗಿದೆ.
ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಕಾರ್ಯಾಚರಣೆಯಲ್ಲಿ CPI ರಾಜಶೇಖರ್, SI ಶ್ರೀನಾಥ್ ರೆಡ್ಡಿ, ಶಶಿ ಹಾಗೂ ಪೊಲೀಸ್ ಸಿಬ್ಬಂದಿಗಳಾದ ವೈಭವ್, ಸಚಿನ್, ಮಹೇಂದ್ರ, ಮಲ್ಲಿಕಾರ್ಜುನ, ವಿನಯ್, ಮನು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು