ಇತ್ತೀಚಿನ ಸುದ್ದಿ
ಅಥ್ಲೇಟಿಕ್ಸ್ : ವಾಗ್ದೇವಿಯ ಆಂಗ್ಲ ಮಾಧ್ಯಮ ಶಾಲೆಯ ಅನುಗ್ರಹ, ಕೌಶಲ್ ರಾಜ್ಯಮಟ್ಟಕ್ಕೆ ಆಯ್ಕೆ
15/11/2025, 20:44
ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.com
ಶಿವಮೊಗ್ಗದಲ್ಲಿ ಶಾಲಾ ಶಿಕ್ಷಣ ಇಲಾಖೆಯವರು ಆಯೋಜಿಸಿದ
ಜಿಲ್ಲಾಮಟ್ಟದ 14 ವರ್ಷ ವಯೋಮಿತಿಗೆೊಳಗಿನ ಅಥ್ಲೇಟಿಕ್ಸ್ ಕ್ರೀಡಾಕೂಟದಲ್ಲಿ ವಾಗ್ದೇವಿ ಆಂಗ್ಲ ಮಾಧ್ಯಮ ಶಾಲೆಯ ಅನುಗ್ರಹ
( 7ನೇ ತರಗತಿ) ತಟ್ಟೆ ಎಸೆತದಲ್ಲಿ ಪ್ರಥಮ ಸ್ಥಾನ, ಕೌಶಲ್ ( 8ನೆಯ ತರಗತಿ) 100 ಮೀ ಓಟದಲ್ಲಿ ದ್ವಿತೀಯ ಸ್ಥಾನವನ್ನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಜವೀರ್ (8ನೆಯ ತರಗತಿ) 100 ಮೀ ಓಟದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಯನ್ನು ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಸದಸ್ಯರು, ಶಿಕ್ಷಕ ವೃಂದದವರು ಪೋಷಕರು, ಅಭಿನಂದಿಸಿ ಮುಂದಿನ ಕ್ರೀಡಾಕೂಟಕ್ಕೆ ಶುಭ ಹಾರೈಸಿರುತ್ತಾರೆ.












