11:09 PM Saturday15 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶ

15/11/2025, 23:02

ಬೆಂಗಳೂರು(reporterkarnataka.com): ಬೆಳಗಾವಿ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ ಮೃತಪಟ್ಟಿರುವ ಬಗ್ಗೆ ತೀವ್ರ ವ್ಯಾಕುಲ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ.
ಪ್ರಾಥಮಿಕ ವರದಿಗಳ ರೀತ್ಯ ಈ ಜಿಂಕೆಗಳು ಸಾಂಕ್ರಾಮಿಕ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಮೃಗಾಲಯದ ಬೇರೆ ಯಾವುದೇ ಪ್ರಾಣಿಗೆ ಸೋಂಕು ತಗುಲದಂತೆ ಎಲ್ಲ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಈ ಜಿಂಕೆಗಳು ಕಲುಷಿತ ನೀರು, ಆಹಾರ ಸೇವಿಸಿ ಕಾಯಿಲೆಗೆ ತುತ್ತಾಗಿ ಮೃತಪಟ್ಟಿವೆಯೇ ಅಥವಾ ಬೆಕ್ಕು ಇತ್ಯಾದಿ ಸಾಕು ಪ್ರಾಣಿಗಳಿಂದ ಈ ಕಾಯಿಲೆ ಹರಡಿದೆಯೇ ಎಂಬ ಬಗ್ಗೆ ಒಂದು ತಜ್ಞರ ಸಮಿತಿ ರಚಿಸಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.
ಮೃಗಾಲಯದಲ್ಲಿರುವ ಪ್ರಾಣಿಗಳು ಈ ರೀತಿ ಸಾವಿಗೀಡಾಗುವುದು ಆತಂಕದ ವಿಚಾರವಾಗಿದ್ದು, ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವಿದ್ದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಈಶ್ವರ ಖಂಡ್ರೆ ಆದೇಶ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು