ಇತ್ತೀಚಿನ ಸುದ್ದಿ
Crime News | ಮೂಡುಬಿದರೆ: ಅಕ್ರಮ ಗೋಸಾಗಾಟ; ಮೂವರು ಆರೋಪಿಗಳ ಬಂಧನ
17/11/2025, 11:59
ಮೂಡುಬಿದರೆ(reporterkarnataka.com): ವಾಹನವೊಂದರಲ್ಲಿ ಅಕ್ರಮವಾಗಿ 3 ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಮೂಡಬಿದ್ರೆ ತಾಲೂಕು ಹೊಸ್ಮಾರು ನೆಲ್ಲಿಕಾರು ಕಡೆಯಿಂದ ಆರೋಪಿಗಳಾದ ಮನ್ಸೂರ್ ಅದ್ಯಪಾಡಿ ಅಲಿಯಾಸ್ ಮೊಹಮ್ಮದ್ ಮನ್ಸೂರ್, ಮೊಹಮ್ಮದ್ ಅಶ್ಫಕ್, ಅಬ್ದುಲ್ ಮೊಹಮ್ಮದ್ ನಿಶಾಮ್ ಮತ್ತು ಇತರರು ಟಾಟಾ ಎಸಿ ಕಂಟೈನರ್ ವಾಹನವೊಂದರಲ್ಲಿ ಅಕ್ರಮವಾಗಿ 3 ಜಾನುವಾರುಗಳನ್ನು ಸಾಗಾಟ ಮಾಡಿಕೊಂಡು ಬರುತ್ತಿದ್ದು, ಅದರಲ್ಲಿ ಮನ್ಸೂರ್ ಅದ್ಯಪಾಡಿ ಅಲಿಯಾಸ್ ಮೊಹಮ್ಮದ್ ಮನ್ಸೂರ್, ಮೊಹಮ್ಮದ್ ಅಶ್ವದ್, ಮತ್ತು ಅಬ್ದುಲ್ ಮೊಹಮ್ಮದ್ ನಿಶಾಮ್ ಎಂಬುವರನ್ನು ವಶಕ್ಕೆ ಪಡೆದಿರುತ್ತೇವೆ. ಇವರ ವಿರುದ್ದ ಮೂಡಬಿದ್ರೆ ಅಪರಾಧ ಕ್ರಮಾಂಕ 178/2025 ಕಲಂ 111 ಬಿ.ಎನ್.ಎಸ್, 11(1)(ಡಿ) ಪ್ರಾಣಿ ಹಿಂಸಾ ಪ್ರತಿಬಂಧಕ ಕಾಯ್ದೆ ಮತ್ತು ಕಲಂ: 4, 5, 7, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಆಧ್ಯಾದೇಶ ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ. 1 ನೇ ಆರೋಪಿ ಮನ್ಸೂರ್ ಅದ್ಯಪಾಡಿ ಅಲಿಯಾಸ್ ಮೊಹಮ್ಮದ್ ಮನ್ಸೂರ್ ಮೇಲೆ ಒಟ್ಟು 29 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದು, ಇದು 30ನೇ ಪ್ರಕರಣವಾಗಿರುತ್ತದೆ. 2ನೇ ಆರೋಪಿ ಮೊಹಮ್ಮದ್ ಅಶ್ವದ್ ನ ಮೇಲೆ ಉಳ್ಳಾಲದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಪ್ರಕರಣ ದಾಖಲಾಗಿದ್ದು, ಇದು 2ನೇ ಪ್ರಕರಣವಾಗಿರುತ್ತದೆ. ಹಾಗೂ 3ನೇ ಆರೋಪಿ ಅಬ್ದುಲ್ ಮೊಹಮ್ಮದ್ ನಿಶಾಮ್ ನ ವಿರುದ್ದ ಇದು ಮೊದಲನೇ ಪ್ರಕರಣವಾಗಿರುತ್ತದೆ. ಆರೋಪಿಗಳ ವಿರುದ್ದ ಸಂಘಟಿತ ಅಪರಾಧ ಪ್ರಕರಣದಂತೆ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.












