ಇತ್ತೀಚಿನ ಸುದ್ದಿ
ಮುಖ್ಯಮಂತ್ರಿ ಗಾದಿಗಾಗಿ ಕಿತ್ತಾಟಕ್ಕೆ ಉಪಶಮನ: ದೆಹಲಿಯಲ್ಲಿ ಒಟ್ಟಿಗೆ ಭೋಜನ ಸವಿದ ಸಿಎಂ, ಡಿಸಿಎಂ, ಸಂಪುಟ ಸಹೋದ್ಯೋಗಿಗಳು
17/11/2025, 18:34
ಹೊಸದಿಲ್ಲಿ(reporterkarnataka.com): ರಾಜ್ಯದ ಗದ್ದುಗೆಗಾಗಿ ನಡೆಯುತ್ತಿದ್ದ ಜಂಗೀ ಕುಸ್ತಿ ತಕ್ಕಮಟ್ಟಿಗೆ ಉಪಶಮನಗೊಂಡಿದ್ದು, ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಭೋಜನಕೂಟದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಾಲ್ಗೊಂಡಿದ್ದಾರೆ.





ರಾಜ್ಯದಲ್ಲಿ ನವೆಂಬರ್ ಕ್ರಾಂತಿ ನಡೆಯುತ್ತದೆ ಎಂದು ಪ್ರತಿಪಕ್ಷ ಬಿಜೆಪಿಯ ನಾಯಕರು ಸೆಪ್ಟೆಂಬರ್ ತಿಂಗಳಿನಿಂದಲೇ ಕೂಗೆಬ್ಬಿಸುತ್ತಿದ್ದರು. ಮುಖ್ಯಮಂತ್ರಿ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಕೂಡ ಮುಖ್ಯಮಂತ್ರಿ ಗಾದಿಗಾಗಿ ದೆಹಲಿ ಮಟ್ಟದಲ್ಲಿ ಸಾಕಷ್ಟು ಪ್ರಭಾವ ಬೀರಿದ್ದರು. ಆದರೆ, ಸದ್ಯದ ಸ್ಥಿತಿಯಲ್ಲಿ ಮುಖ್ಯಮಂತ್ರಿಯವರನ್ನು ಬದಲಾಯಿಸಲು ಹೈಕಮಾಂಡ್ ಬಳಿ ಯಾವುದೇ ಪ್ರಬಲವಾದ ಕಾರಣಗಳಿಲ್ಲ ಮಾತ್ರವಲ್ಲದೆ ಸಿದ್ದರಾಮಯ್ಯ ಅವರ ಜನಪ್ರಿಯತೆಗೆ ಯಾವುದೇ ಕುಂದು ಬಾರದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಷಯವನ್ನು ಕಾಂಗ್ರೆಸ್ ಹೈಕಮಾಂಡ್ ಬದಿಗೆ ಸರಿಸಿದೆ ಎನ್ನಲಾಗಿದೆ.
ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರೆ ಸಚಿವರು ಮತ್ತು ಶಾಸಕರುಗಳ ಜೊತೆಗೆ ದೆಹಲಿಯ ಕರ್ನಾಟಕ ಭವನದಲ್ಲಿ ಮಧ್ಯಾಹ್ನದ ಉಪಹಾರ ಸವಿದಿದ್ದಾರೆ.












