11:50 PM Sunday28 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

40ಕ್ಕೂ ಅಧಿಕ ಕಳವು ಪ್ರಕರಣ: ಕುಖ್ಯಾತ ಆರೋಪಿ ‘ಇತ್ತೆ ಬರ್ಪೆ ಅಬುಬಕ್ಕರ್’ ಬಂಧನ

17/11/2025, 21:06

ಮಂಗಳೂರು(reporterkarnataka.com): ಹೊರ ರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸುಮಾರು 40ಕ್ಕೂ ಅಧಿಕ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿತನ್ನು ಪೊಲೀಸರು ಬಂಧಿಸಿದ್ದು, ಆತನಿಂದ 5,65,000 ಮೌಲ್ಯದ 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ‘ಇತ್ತೆ ಬರ್ಪೆ ಅಬುಬಕ್ಕರ್’ ಎಂದು ಗುರುತಿಸಲಾಗಿಧ. ಅರೋಪಿತನಿಂದ 5,65,000 ರೂ. ಮೌಲ್ಯದ 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.
ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತೂರು ಎಂಬಲ್ಲಿ ದಿನಾಂಕ 02.10.2025 ರಿಂದ ದಿನಾಂಕ 6.10.2025ರ ಮಧ್ಯದ ಅವಧಿಯಲ್ಲಿ ಬೀಗ ಹಾಕಿದ್ದ ಮನೆಯೊಂದರಲ್ಲಿ ನಡೆದ ಸುಮಾರು 149 ಗ್ರಾಂ ತೂಕದ ಒಟ್ಟು 9,50,000/- ರೂ. ಮೌಲ್ಯದ ಚಿನ್ನಾಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 85/2025 ಕಲಂ 331(1), 331(4), 305 ಬಿ.ಎನ್. ಎಸ್. 2023 ರಂತೆ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆ ನಡೆಸಲಾಗಿ, ಹೊರ ರಾಜ್ಯಗಳಲ್ಲಿ ಹಾಗೂ ಹಲವು ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ, ಮಂಗಳೂರು, ಜೋಕಟ್ಟೆ ನಿವಾಸಿ ಅಬುಬಕ್ಕರ್ ಅಲಿಯಾಸ್ ಅಬ್ದುಲ್ ಖಾದರ್ ಅಲಿಯಾಸ್ ಇತ್ತೆ ಬರ್ಪೆ ಅಬುಬಕ್ಕರ್ (70) ಎಂಬಾತನನ್ನು ದಸ್ತಗಿರಿ ಮಾಡಿ, ಆರೋಪಿತನಿಂದ ಸುಮಾರು 5,65,000 ರೂ. ಬೆಲೆಬಾಳುವ ಒಟ್ಟು 56.850 ಗ್ರಾಂ ತೂಕದ ಚಿನ್ನಾಭರಣಗಳನ್ನು ಹಾಗೂ ಮಂಗಳೂರು ಕೊಣಾಜೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳವು ಮಾಡಿದ 60,000/-ರೂ. ಮೌಲ್ಯದ ದ್ವಿಚಕ್ರ ವಾಹನವನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ.
ಈ ಪ್ರಕರಣದಲ್ಲಿ ಆರೋಪಿತರ ಪತ್ತೆಕಾರ್ಯದಲ್ಲಿ, ಮಾನ್ಯ ಬೆಳ್ತಂಗಡಿ ಡಿ.ವೈ.ಎಸ್. ಪಿ. ರೋಹಿಣಿ ಸಿ.ಕೆ. ರವರ ಮಾರ್ಗದರ್ಶನದಂತೆ, ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಬಿ.ಜಿ. ಸುಬ್ಬಾಪೂರ ಮಠ ರವರ ತಂಡ, ವೇಣೂರು ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಅಕ್ಷಯ್ ಡವಗಿ, ಓಮನ ಎನ್. ಹಾಗೂ ಎ.ಎಸ್. ಐ. ಗಳಾದ ವೆಂಕಟೇಶ್ ನಾಯ್ಕ, ಬೆನ್ನಿಚ್ಚನ್, ಹಚ್.ಸಿ. 405 ಕೃಷ್ಣ, ಧರ್ಮಸ್ಥಳ ಠಾಣಾ ಹಚ್.ಸಿ. 1016 ಪ್ರಶಾಂತ್, ಪಿ.ಸಿ. 975 ಚರಣ್, ವೇಣೂರು ಪೊಲೀಸ್ ಠಾಣಾ ಪಿ.ಸಿ. ಬಸವರಾಜ್, ಪಿ.ಸಿ. ಮೋಹನ್, ಮಪಿಸಿ. ಜಯಶ್ರೀ ಪೂಂಜಾಲಕಟ್ಟೆ ಪೊಲೀಸ್ ಠಾಣಾ ಪಿ.ಸಿ. ರಜಿತ್ ಮಂಗಳೂರು ಜಿಲ್ಲಾ ಗಣಕ ಯಂತ್ರದ ಸಿಬ್ಬಂದಿಗಳಾದ ಸಂಪತ್ ಮತ್ತು ದಿವಾಕರ ರವರುಗಳನ್ನು ಒಳಗೊಂಡ ತಂಡ ಕರ್ತವ್ಯ ನಿರ್ವಹಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು