2:41 PM Wednesday8 - July 2026
ಬ್ರೇಕಿಂಗ್ ನ್ಯೂಸ್
ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ…

ಇತ್ತೀಚಿನ ಸುದ್ದಿ

ಬೀಚ್ ಉತ್ಸವ, ಕಲಾಪರ್ಬ, ಚಿತ್ರಸಂತೆ, ಫಲಪುಷ್ಪ ಪ್ರದರ್ಶನ: ಡಿಸೆಂಬರ್ 19 ರಿಂದ ಮೇಳೈಸಲಿದೆ ಕರಾವಳಿ ಉತ್ಸವ

18/11/2025, 20:21

ಮಂಗಳೂರು(reporterkarnataka.com): ಈ ಸಾಲಿನ ಕರಾವಳಿ ಉತ್ಸವ ಕಾರ್ಯಕ್ರಮ ಡಿಸೆಂಬರ್ 19 ರಿಂದ ಜನವರಿ 4 ರವರೆಗೆ ನಡೆಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಹೇಳಿದ್ದಾರೆ.
ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕರಾವಳಿ ಉತ್ಸವ ಕಾರ್ಯಕ್ರಮ ನಡೆಸುವ ಬಗ್ಗೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕರಾವಳಿ ಉತ್ಸವದಲ್ಲಿ ಜನಾಕರ್ಷಣೆ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುತ್ತದೆ. ಸಾಂಸ್ಕøತಿಕ, ಚಿತ್ರಕಲೆ, ಸಾಹಸ ಹಾಗೂ ಪ್ರಾಕೃತಿಕ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬೀಚ್ ಉತ್ಸವ, ಕಲಾ ಪರ್ಬ, ಚಿತ್ರಸಂತೆ, ಫಲಪುಷ್ಪ ಪ್ರದರ್ಶನ ಮತ್ತಿತರ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಜಿಲ್ಲೆಯ ಎಲ್ಲಾ ಪ್ರಮುಖ ಬೀಚ್‍ಗಳಲ್ಲಿ ವೈವಿಧ್ಯಮಯ ಪ್ರತ್ಯೇಕ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಚಿಂತಿಸಲಾಗಿದೆ. ಕ್ರೀಡಾ ಕಾರ್ಯಕ್ರಮಗಳಿಗೆ ಕರಾವಳಿ ಉತ್ಸವದಲ್ಲಿ ಪ್ರಾಮುಖ್ಯತೆ ನೀಡಲಾಗಿದೆ. ಪ್ರಮುಖವಾಗಿ ಬೀಚ್ ಫುಟ್‍ಬಾಲ್ ಮತ್ತು ವಾಲಿಬಾಲ್ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಅವರು ಹೇಳಿದರು.
ಲಾಲ್‍ಬಾಗ್ ಕರಾವಳಿ ಉತ್ಸವ ಮೈದಾನ, ಕದ್ರಿ ಉದ್ಯಾನವನ ಹಾಗೂ ಪ್ರಮುಖ ಬೀಚ್‍ಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಬೈಕ್ ಮತ್ತು ಕಾರು ಪ್ರದರ್ಶನ ಹಾಗೂ ಶ್ವಾನ ಪ್ರದರ್ಶನ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಪಿಲಿಕುಳದಲ್ಲಿಯೂ ಕರಾವಳಿ ಉತ್ಸವದ ಕೆಲವು ಕಾರ್ಯಕ್ರಮಗಳನ್ನು ಏರ್ಪಡಿಸುವ ಬಗ್ಗೆ ಯೋಚಿಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದ ರೂಪುರೇಷೆ ಹಾಗೂ ಅಗತ್ಯ ಸಿದ್ಧತೆಗಳನ್ನು ನಡೆಸುವ ಬಗ್ಗೆ ಒಂದು ವಾರದೊಳಗೆ ವರದಿ ನೀಡಬೇಕು ಹಾಗೂ ಟೆಂಡರ್ ಪ್ರಕ್ರಿಯೆಯನ್ನು ಶೀಘ್ರವೇ ಕೈಗೊಳ್ಳುವಂತೆ ಅವರು ತಿಳಿಸಿದರು.
ಕರಾವಳಿ ಉತ್ಸವದ ಅಂಗವಾಗಿ ಸಾರ್ವಜನಿಕರಿಗೆ ನವ ಮಂಗಳೂರು ಬಂದರಿನಲ್ಲಿ ಹಡಗು ವೀಕ್ಷಣೆ ಹಾಗೂ ಕೋಸ್ಟ್‌ ಗಾರ್ಡ್ ನೌಕೆಗಳ ವೀಕ್ಷಣೆಗೆ ಅವಕಾಶ ನೀಡುವ ಕುರಿತು ಸಂಬಂಧಪಟ್ಟ ಪ್ರಾಧಿಕಾರದೊಂದಿಗೆ ಚರ್ಚಿಸಲಾಗುವುದು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಉಪ ಪೋಲಿಸ್ ಆಯುಕ್ತ ಮಿಥುನ್ ಹೆಚ್. ಎನ್., ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಸಂಘ ಸಂಸ್ಥೆ ಪ್ರತಿನಿಧಿಗಳು, ವಿವಿಧ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು