6:41 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಕೃಷ್ಣಾ ನದಿ ಪ್ರವಾಹ ಪೀಡಿತರಿಗೆ ಶಾಶ್ವತ ಪುನರ್ವಸತಿ: ನಂದೇಶ್ವರ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

01/09/2021, 15:57

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷ್ಣಾ ನದಿ  ಪ್ರವಾಹಕ್ಕೆ ತುತ್ತಾಗುವ ನಂದೇಶ್ವರ ಗ್ರಾಮದ ಜನರಿಗೆ ಶಾಶ್ವತ ಪುನರ್ವಸತಿ ಕಲ್ಪಿಸುವಂತೆ ಒತ್ತಾಯಿಸಿ ಜಮಖಂಡಿ  ರಾಷ್ಟ್ರೀಯ ಹೆದ್ದಾರಿ ತಡೆದು ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಗಜಾನನ್ ಮಂಗಸೂಳಿ  ಮಾತನಾಡಿ, ನದಿ ಪಾತ್ರದ ಜನರಿಗೆ ಪ್ರತಿ ವರ್ಷ ಇದೊಂದು ದೊಡ್ಡ ಆಘಾತವಾಗಿದೆ. ಪ್ರವಾಹ ಬರುವ ಮುಂಚಿತವಾಗಿ ತಮ್ಮ ತಮ್ಮ ಸ್ಥಳಗಳನ್ನು ಬಿಟ್ಟು ಬಂದು ಪ್ರವಾಹ ತಗ್ಗಿದ ಮೇಲೆ ಮತ್ತೆ ತಮ್ಮ ಗ್ರಾಮಗಳಿಗೆ ತೆರಳಿ ಜೀವನ ನಡೆಸುವುದು ತುಂಬಾ ಕಷ್ಟಕರವಾಗಿದೆ. ಸರಕಾರ ಆದಷ್ಟು ಬೇಗ ಎಚ್ಚೆತ್ತುಕೊಂಡು ಶೀಘ್ರವಾಗಿ 2019ರ ಪರಿಹಾರ ಹಾಗೂ ಮತ್ತು ಬೆಳೆಗಳ ಹಾನಿ ಮುಂತಾದುವುಗಳ ಪರಿಹಾರವನ್ನು ತಕ್ಷಣ ನೀಡಬೇಕು. ಹಾಗೆ ನದಿ ತೀರದ ನಿವಾಸಿಗಳಿಗೆ ಶಾಶ್ವತ ಪುನರ್ವಸತಿ ಒದಗಿಸಬೇಕೆಂದು ಆಗ್ರಹಿಸಿದರು.


ಪ್ರತಿಭಟನೆಯಲ್ಲಿ ರಮೇಶ್ ಪಾಟೀಲ್,ಗಜಾನನ ಮಂಗಸೂಳಿ, ರಾಜು ಜಮಖಂಡಿ, ಕಾರ್ ಸತ್ಯಪ್ಪ ಭಾಗ್ಯಾ ನವರ, ಶಿವು ಗುಡ್ಡಾಪುರ್, ಬಿ.ಆರ್. ಬೋಜನವರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು