5:31 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

21/11/2025, 11:01

ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com

ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವ ಮಕ್ಕಳಿಗೆ ಹೆಲ್ಮೆಟ್ ಮತ್ತು ಸುರಕ್ಷತಾ ಕ್ರಮಗಳನ್ನು ಅನ್ವಯಿಸುವ ಕೇಂದ್ರ ಮೋಟಾರು ವಾಹನ ನಿಯಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತಕ್ಷಣವೇ ಮುಂದಾಗಬೇಕು’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
‘ಒಂಬತ್ತು ತಿಂಗಳಿನಿಂದ ನಾಲ್ಕು ವರ್ಷದೊಳಗಿನ ಮಕ್ಕಳನ್ನು ಹಿಂಬದಿ ಸವಾರರನ್ನಾಗಿ ಕರೆದುಕೊಂಡು ಹೋಗುವಾಗ ಮಕ್ಕಳೂ ಹೆಲ್ಮೆಟ್ ಧರಿಸಿರಬೇಕು ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಸಂಬಂಧ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಮುಂದುವರೆಸಬೇಕು’ ಎಂದು ನ್ಯಾಯಪೀಠವು ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಗೆ ನಿರ್ದೇಶಿಸಿದೆ.
ಈ ಸಂಬಂಧ ಶಿವಮೊಗ್ಗದ ಕಟೀಲ್ ಅಶೋಕ ಪೈ ಸ್ಮಾರಕ ಕಾಲೇಜಿನ ಮನೋವಿಜ್ಞಾನ ವಿಭಾಗದ ಮುಖ್ಯಸ್ಥೆ ಕೆ.ಅರ್ಚನಾ ಭಟ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.
ಮಾರುಕಟ್ಟೆಯಲ್ಲಿ ಸುರಕ್ಷತಾ ಪರಿಕರಗಳ ಲಭ್ಯತೆಯನ್ನು ಖಚಿತಪಡಿಸಿಕೊಂಡ ಬಳಿಕ ನಿಯಮವನ್ನು ಜಾರಿಗೊಳಿಸಲು ನ್ಯಾಯಪೀಠ ಆರು ತಿಂಗಳ ಕಾಲಾವಕಾಶ ನೀಡಿದೆ.
‘ಕೇಂದ್ರ ಮೋಟಾರು ವಾಹನ ನಿಯಮಗಳನ್ನು ಜಾರಿಗೆ ತರುವಲ್ಲಿ ಅಧಿಕಾರಿಗಳು ಹಲವು ಕ್ರಮಗಳನ್ನು ಕೈಗೊಂಡಿದ್ದರೂ, ವಾಸ್ತವವಾಗಿ ಅವುಗಳಾವುವೂ ಕಠಿಣ ರೀತಿಯಲ್ಲಿ ಜಾರಿಗೆ ಬಂದಿಲ್ಲ. ಹೀಗಾಗಿ, ನಿಯಮಗಳನ್ನು ಜಾರಿಗೆ ತರಲು ಸರ್ಕಾರ ತಕ್ಷಣವೇ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು’ ಎಂದು ತಾಕೀತು ಮಾಡಿರುವ ನ್ಯಾಯಪೀಠ ಅರ್ಜಿ ವಿಲೇವಾರಿ ಮಾಡಿದೆ.
‘ಸುರಕ್ಷತಾ ಸಲಕರಣೆಗಳ ಜೊತೆಗೆ, ನಾಲ್ಕು ವರ್ಷದ ಮಕ್ಕಳನ್ನು ಹಿಂಬದಿ ಸವಾರರನ್ನಾಗಿ ಕರೆದೊಯ್ಯುವಾಗ ಮೋಟಾರ್‌ ಸೈಕಲ್‌ ವೇಗವು ಗಂಟೆಗೆ 40 ಕಿ.ಮೀ ಗಿಂತ ಹೆಚ್ಚಿರಬಾರದು’ ಎಂದು ಕೇಂದ್ರದ ಮೋಟಾರು ಸಾರಿಗೆಯ ಹೊಸ ನಿಯಮದಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು