6:50 PM Friday21 - November 2025
ಬ್ರೇಕಿಂಗ್ ನ್ಯೂಸ್
ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ…

ಇತ್ತೀಚಿನ ಸುದ್ದಿ

ಮೆಕ್ಕೆಜೋಳ ರೈತರ ಪ್ರತಿಭಟನೆ; ಖರೀದಿ ಕೇಂದ್ರಕ್ಕೆ ಒತ್ತಾಯ: ಕಾವೇರಿಯಲ್ಲಿ ಮುಖ್ಯಮಂತ್ರಿ ಸಭೆ

21/11/2025, 18:45

ಬೆಂಗಳೂರು(reporterkarnataka.com): ಉತ್ತರ ಕರ್ನಾಟಕದ ಮೆಕ್ಕೆಜೋಳ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತು ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯಲು ರೈತರು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಭೆ ನಡೆಸಿದ್ದಾರೆ.
ಸಚಿವರಾದ ಎಚ್. ಕೆ. ಪಾಟೀಲ್, ಕೆ.ಎಚ್. ಮುನಿಯಪ್ಪ, ಶಿವಾನಂದ ಪಾಟೀಲ್, ಕೆ. ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಆರ್ಥಿಕ ಇಲಾಖೆಯ ಉನ್ನತ ಅಧಿಕಾರಿಗಳು ಮತ್ತು ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದಾರೆ.


ಕೃಷಿ ಸಚಿವರಾದ ಚಲುವರಾಯಸ್ವಾಮಿಯವರು ದೆಹಲಿಯಲ್ಲಿದ್ದು ಆನ್ ಲೈನ್ ಮೂಲಕ ಸಭೆಗೆ ಸೇರ್ಪಡೆಗೊಂಡಿದ್ದಾರೆ.
ರಾತ್ರಿ ಕೇಂದ್ರ ಕೃಷಿ ಸಚಿವರನ್ನು ಭೇಟಿಯಾಗಿ ಮೆಕ್ಕೆಜೋಳ ರೈತರ ಸಮಸ್ಯೆ ಬಗ್ಗೆ ವಿವರಿಸಿ ನೆರವು ಕೇಳಿರುವುದಾಗಿ ಸಚಿವ ಚಲುವರಾಯಸ್ವಾಮಿಯವರು ಸಭೆಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು