9:36 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಕೃಷ್ಣಾ ನದಿ ಪ್ರವಾಹಪೀಡಿತರಿಗೆ ಶೀಘ್ರದಲ್ಲೇ ಪುನರ್ವಸತಿ: ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅಭಯ

01/09/2021, 18:47

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷ್ಣಾ ನದಿ ಪ್ರವಾಹದಿಂದ ಸಂತ್ರಸ್ತಗೊಂಡ ಅಥಣಿಯ ನಂದೇಶ್ವರ ಗ್ರಾಮದ ಪುನರ್ವಸತಿ ಕೇಂದ್ರದ ಕುರಿತು ಸ್ಥಳೀಯ ಶಾಸಕರು ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ತ್ವರಿತವಾಗಿ ಪುನರ್ವಸತಿ ಕೇಂದ್ರವನ್ನು ಗ್ರಾಮಸ್ಥರಿಗೆ ಹಸ್ತಾಂತರಿಸಲಾಗುವುದು. ಹಾಗೆ ಪ್ರವಾಹ

ಪರಿಹಾರವನ್ನು ಫಲಾನುಭವಿಯ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.

ಪ್ರವಾಹ ಸಂತ್ರಸ್ತರು ನಡೆಸುತ್ತಿರುವ  ಬೃಹತ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಅವರು ಮಾಧ್ಯಮದ ಜತೆ ಮಾತನಾಡಿದರು.

ಹಿಪ್ಪರಗಿ ಆಣೆಕಟ್ಟು ಹಿನ್ನೀರಿನ ಸಂಘದ ಅಧ್ಯಕ್ಷ ರಮೇಶ್ ಗೌಡ ಪಾಟೀಲ್  ಮಾತನಾಡಿ, ಕೃಷ್ಣಾ ನದಿ ಪ್ರವಾಹದ ಹಿನ್ನೆಲೆಯಲ್ಲಿ ಸುಮಾರು  ಹಳ್ಳಿಗಳು ಜಲಾವೃತಗೊಂಡ ಕಾರಣ 2005ರಲ್ಲಿ ಪ್ರವಾಹ ಬಂದ ಸಂದರ್ಭದಲ್ಲಿ ಸರ್ಕಾರ ನೀಡಿದ ಆಶ್ವಾಸನೆಯಂತೆ 2006ರಲ್ಲಿ ಪುನರ್ವಸತಿ ಕೇಂದ್ರ ಸ್ಥಾಪಿಸಿ  ಬಿಡಬೇಕಿತ್ತು. ಆದರೆ ಇದುವರೆಗೂ ಸರ್ಕಾರ ಇತ್ತ ಕಡೆ ಗಮನ ಹರಿಸಿಲ್ಲ. ಇನ್ನಾದರೂ ಆದಷ್ಟು ನಮಗೆ ಪುನರ್ವಸತಿ ಕೇಂದ್ರ ಸ್ಥಾಪಿಸಬೇಕೆಂದರು.

ಇತ್ತೀಚಿನ ಸುದ್ದಿ

ಜಾಹೀರಾತು